ADVERTISEMENT

ಬಿಜೆಪಿಯಲ್ಲಿ ಭಿನ್ನಾಭಿಪ್ರಾಯ ಸೃಷ್ಟಿಸಲು ಜಾರಕಿಹೊಳಿ ಹುನ್ನಾರ: ಬಿ.ಸಿ.ಪಾಟೀಲ

​ಪ್ರಜಾವಾಣಿ ವಾರ್ತೆ
Published 5 ಫೆಬ್ರುವರಿ 2022, 4:06 IST
Last Updated 5 ಫೆಬ್ರುವರಿ 2022, 4:06 IST
ಸಚಿವ ಬಿ.ಸಿ.ಪಾಟೀಲ
ಸಚಿವ ಬಿ.ಸಿ.ಪಾಟೀಲ    

ಚಿತ್ರದುರ್ಗ: ‘ಬಿಜೆಪಿಯಲ್ಲಿ ಭಿನ್ನಾಭಿಪ್ರಾಯ ಸೃಷ್ಟಿಸಲು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಪ್ರಯತ್ನಿಸುತ್ತಿದ್ದಾರೆ. ಕಾಂಗ್ರೆಸ್‌ನ ಈ ಹುನ್ನಾರ ಸಫಲವಾಗುವುದಿಲ್ಲ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ ಪ್ರತಿಕ್ರಿಯಿಸಿದರು.

ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ಮಾತನಾಡಲು ಜಾರಕಿಹೊಳಿ ಯಾರು? ಅವರು ಬಿಜೆಪಿ ವಕ್ತಾರರೇನೂ ಅಲ್ಲ. ಅವರು ಜ್ಯೋತಿಷ್ಯ, ಭವಿಷ್ಯ ಹೇಳುತ್ತಾರಾ’ ಎಂದು ಪ್ರಶ್ನಿಸಿದರು.

‘ಸಚಿವ ಸಂಪುಟ ಪುನರ್‌ ರಚನೆ ಅಥವಾ ವಿಸ್ತರಣೆಯ ನಿರ್ಧಾರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೆಗೆದುಕೊಳ್ಳುತ್ತಾರೆ. ಖಾತೆ ಬದಲಾವಣೆ ಮಾಡುವ ಪರಮಾಧಿಕಾರವೂ ಅವರಿಗೆ ಇದೆ. ಅವರು ದೆಹಲಿಗೆ ಯಾವ ಕಾರಣಕ್ಕೆ ಹೋಗುತ್ತಿದ್ದಾರೆ ಎಂಬುದು ಗೊತ್ತಿಲ್ಲ. ಆದರೆ, ಬಿಜೆಪಿಯ ಆಂತರಿಕ ವಿಚಾರಗಳ ಬಗ್ಗೆ ವಿರೋಧ ಪಕ್ಷದ ಮುಖಂಡರು ಮಾತನಾಡುತ್ತಿರುವುದು ಸರಿ ಇಲ್ಲ’ ಎಂದು ಕಿಡಿಕಾರಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.