ADVERTISEMENT

ಮೈಸೂರು | ಸಿಎಂ ಆಯ್ಕೆಯಾಗಿರುವುದು 5 ವರ್ಷಕ್ಕೆ: ಸತೀಶ ಜಾರಕಿಹೊಳಿ

​ಪ್ರಜಾವಾಣಿ ವಾರ್ತೆ
Published 5 ಜನವರಿ 2026, 6:12 IST
Last Updated 5 ಜನವರಿ 2026, 6:12 IST
<div class="paragraphs"><p>ಸತೀಶ ಜಾರಕಿಹೊಳಿ</p></div>

ಸತೀಶ ಜಾರಕಿಹೊಳಿ

   

ಮೈಸೂರು: ‘ಮುಖ್ಯಮಂತ್ರಿ ಆಯ್ಕೆ ಆಗಿರುವುದು ಐದು ವರ್ಷಕ್ಕೆ. ಅದನ್ನು ನಾವು ಹಲವು ಬಾರಿ ಹೇಳಿದ್ದೇವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಹೇಳಿದ್ದಾರೆ. ಮತ್ತೆ ಮತ್ತೆ ಈ ಪ್ರಶ್ನೆ, ಚರ್ಚೆ ಬೇಡ’ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಇಲ್ಲಿ ಸೋಮವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಬಜೆಟ್ ನಂತರ ಅಧಿಕಾರ ಹಂಚಿಕೆ ಚರ್ಚೆ ನಡೆಯುತ್ತದೆ ಎಂದು ನಾನು ಎಲ್ಲಿಯೂ ಹೇಳಿಲ್ಲ. ಅಧಿಕಾರ ಹಂಚಿಕೆಯ ಬಗ್ಗೆ ನಿರ್ಧರಿಸುವ ಸ್ಥಾನದಲ್ಲೂ ನಾನಿಲ್ಲ. ಮುಖ್ಯಮಂತ್ರಿ ಸ್ಥಾನದ ರೇಸ್‌ನಲ್ಲೂ ಇಲ್ಲ’ ಎಂದರು.

ADVERTISEMENT

‘ಕೆಪಿಸಿಸಿ ಅಧ್ಯಕ್ಷ ಸ್ಥಾನದ ಚರ್ಚೆ ಈಗ ಇಲ್ಲ. ಅದೆಲ್ಲ ಬಂದಾಗ ನೋಡೊಣ’ ಎಂದು ಪ್ರತಿಕ್ರಿಯಿಸಿದರು.

‘ಬಳ್ಳಾರಿ ಗಲಾಟೆ ವಿಚಾರದಲ್ಲಿ ನಿಷ್ಪಕ್ಷಪಾತವಾಗಿ ತನಿಖೆ ನಡೆಯುತ್ತಿದೆ. ತನಿಖೆಯ ವರದಿ ಬರಲಿ. ಆಗ ಸತ್ಯಾಸತ್ಯೆತೆ ತಿಳಿಯುತ್ತದೆ’ ಎಂದರು.