
ಪ್ರಜಾವಾಣಿ ವಾರ್ತೆ
ಕುಮಟಾ (ಉತ್ತರ ಕನ್ನಡ): ‘ದಲಿತರನ್ನು ಸಿ.ಎಂ ಮಾಡಬೇಕು ಎಂದಾಕ್ಷಣ, ಮಾಡಲು ಆಗದು. ಸದ್ಯಕ್ಕೆ ಸಿ.ಎಂ ಸಿದ್ದರಾಮಯ್ಯ ಇದ್ದಾರೆ. ಅವರೇ ಮುಂದುವರಿಯುತ್ತಾರೆ. ನಾನು ಮುಖ್ಯಮಂತ್ರಿ ಹುದ್ದೆ ರೇಸ್‌ನಲ್ಲಿಲ್ಲ’ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
‘ಸಿದ್ದರಾಮಯ್ಯ ಅವರನ್ನು ಐದು ವರ್ಷಕ್ಕೆ ಆಯ್ಕೆ ಮಾಡಲಾಗಿದೆ. ಗೊಂದಲಗಳಿಗೆ ತೆರೆ ಬೀಳಬೇಕಿದೆ. ಪಕ್ಷದ ಹೈಕಮಾಂಡ್ ಸೂಕ್ತವಾಗಿ ನಿರ್ಧರಿಸುತ್ತದೆ’ ಎಂದು ಸೋಮವಾರ ಸುದ್ದಿಗಾರರಿಗೆ ತಿಳಿಸಿದರು.
‘ಬಿಜೆಪಿಯವರು ಬೇರೆಯವರ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡುತ್ತಿದ್ದರು. ಈಗ ಅವರ ಪಕ್ಷದ ಶಾಸಕ ಲಂಚ ಸ್ವೀಕರಿಸುವ ವೇಳೆ ಸಿಕ್ಕಿಬಿದ್ದು, ಪಕ್ಷದ ಭ್ರಷ್ಟಾಚಾರಕ್ಕೆ ಸಾಕ್ಷಿ ಆಗಿದ್ದಾರೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.