ಬೆಂಗಳೂರು: ವಿಧಾನಸಭೆಯಲ್ಲಿ ಆಡಳಿತ ಪಕ್ಷದ ಮುಖ್ಯಸಚೇತಕರನ್ನಾಗಿ ಶಾಸಕ ಸತೀಶ್ ರೆಡ್ಡಿಯವರನ್ನು ನೇಮಿಸಿ ಅಧಿಸೂಚನೆ ಹೊರಡಿಸಲಾಗಿದ್ದು, ವಿಧಾನಸಭಾಧ್ಯಕ್ಷರು ಸದನದಲ್ಲಿ ಮಂಗಳವಾರ ಈ ವಿಷಯ ಪ್ರಕಟಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸತೀಶ್ ರೆಡ್ಡಿಬೆಂಗಳೂರಿನ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರು. ಇವರು ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದರು. ಇವರಿಗೆ ಸಚಿವ ಸ್ಥಾನ ಒಲಿಯಲಿಲ್ಲ. ಮುಖ್ಯ ಸಚೇತಕ ಸ್ಥಾನ ನೀಡಿ ಸಮಾಧಾನಪಡಿಸಲಾಗಿದೆ. ಈ ಹಿಂದೆ ಸುನಿಲ್ ಕುಮಾರ್ ಮುಖ್ಯ ಸಚೇತಕರಾಗಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.