ADVERTISEMENT

ಅದಿರು ಕದ್ದು ಸಾಗಣೆ: ಸತೀಶ್ ಸೈಲ್‌ ಅವರ ₹64 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

ಸತೀಶ್‌ ಸೈಲ್‌ ಗೋವಾ ವಾಣಿಜ್ಯ ಸಂಕೀರ್ಣ, ಜಮೀನುಗಳು ಇ.ಡಿ ತೆಕ್ಕೆಗೆ

​ಪ್ರಜಾವಾಣಿ ವಾರ್ತೆ
Published 9 ನವೆಂಬರ್ 2025, 19:54 IST
Last Updated 9 ನವೆಂಬರ್ 2025, 19:54 IST
<div class="paragraphs"><p>ಸತೀಶ್ ಸೈಲ್‌</p></div>

ಸತೀಶ್ ಸೈಲ್‌

   

ಬೆಂಗಳೂರು: ಬೇಲೆಕೇರಿ ಬಂದರಿನಿಂದ ಕಬ್ಬಿಣದ ಅದಿರು ಕದ್ದು ಸಾಗಿಸಿದ ಪ್ರಕರಣದಲ್ಲಿ ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ ಅವರಿಗೆ ಸೇರಿದ ₹64 ಕೋಟಿಯಷ್ಟು ಮಾರುಕಟ್ಟೆ ಮೌಲ್ಯದ ಸ್ಥಿರಾಸ್ತಿಗಳನ್ನು ಜಾರಿ ನಿರ್ದೇಶನಾಲಯವು (ಇ.ಡಿ) ಮುಟ್ಟುಗೋಲು ಹಾಕಿಕೊಂಡಿದೆ.

ಗೋವಾದ ವಾಸ್ಕೋಡಗಾಮಾದ ‘ಅವರ್ ಲೇಡಿ ಮರ್ಸಸ್‌’ ವಾಣಿಜ್ಯ ಸಂಕೀರ್ಣ, ದಕ್ಷಿಣ ಗೋವಾದ ಮರ್ಮಗಾವೊ ತಾಲ್ಲೂಕಿನ ವಿವಿಧೆಡೆ ಇರುವ 16,850 ಚದರ ಮೀಟರ್‌ ಅಳತೆಯ ಕೃಷಿ ಜಮೀನುಗಳು, 12,500 ಚದರ ಮೀಟರ್‌ ಅಳತೆಯ ನಿವೇಶನಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಈ ಸ್ಥಿರಾಸ್ತಿಗಳ ಮಾರ್ಗದರ್ಶಿ ಮೌಲ್ಯವೇ ₹21 ಕೋಟಿಯಷ್ಟಾಗುತ್ತದೆ ಎಂದು ಇ.ಡಿ ತಿಳಿಸಿದೆ.

ADVERTISEMENT

ಬೇಲೆಕೇರಿ ಬಂದರಿನಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯು ವಶಕ್ಕೆ ಪಡೆದು ಸಂಗ್ರಹಿಸಿದ್ದ 5 ಲಕ್ಷ ಟನ್‌ಗಳಷ್ಟು ಕಬ್ಬಿಣದ ಅದಿರಿನಲ್ಲಿ, 1.54 ಲಕ್ಷ ಟನ್‌ಗಳಷ್ಟು ಅದಿರನ್ನು ಸತೀಶ್‌ ಸೈಲ್‌ ಅವರ ಒಡೆತನದ ಎಸ್‌ಎಂಎಸ್‌ಪಿಎಲ್‌ ಕಂಪನಿಯು ಚೀನಾಕ್ಕೆ ರಫ್ತು ಮಾಡಿತ್ತು. ಎಂವಿ ಕೊಲಂಬಿಯ ಮತ್ತು ಎಂವಿ ಮ್ಯಾಡರಿನ್‌ ಎಂಬ ಹಡಗುಗಳ ಮೂಲಕ ಈ ಅದಿರನ್ನು ಸಾಗಿಸಲಾಗಿತ್ತು ಎಂದು ವಿವರಿಸಿದೆ.

ಚೀನಾದಲ್ಲಿ ಮತ್ತೊಂದು ಕಂಪನಿಯನ್ನು ತರೆದು, ಆ ಕಂಪನಿಯು ಈ ಅದಿರನ್ನು ಖರೀದಿಸಿದಂತೆ ದಾಖಲೆ ಸೃಷ್ಟಿಸಲಾಗಿತ್ತು. ವಾಸ್ತವದಲ್ಲಿ ಬೇರೆಯದ್ದೇ ಕಂಪನಿಗೆ ಅದಿರನ್ನು ಮಾರಾಟ ಮಾಡಲಾಗಿತ್ತು ಎಂದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.