ಬೆಂಗಳೂರು: ಪ್ರಸಾದ್ (PRASHAD) ಯೋಜನೆ ಅಡಿಯಲ್ಲಿ ಬೆಳಗಾವಿಯ ಸವದತ್ತಿಯಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದ ಅಭಿವೃದ್ಧಿ ಯೋಜನೆಗೆ ಕೇಂದ್ರ ಪ್ರವಾಸೋದ್ಯಮ ಸಚಿವಾಲಯ ಅನುಮೋದನೆ ನೀಡಿದೆ.
‘₹18.37 ಕೋಟಿ ವೆಚ್ಚದಲ್ಲಿ ಯಾತ್ರಿಕರ ಆಗಮನ ಕೇಂದ್ರ, ಕೆಫೆಟೇರಿಯಾ, ಪ್ರಥಮ ಚಿಕಿತ್ಸಾ ಕೇಂದ್ರ ಮತ್ತು ಇತರ ಆಧುನಿಕ ಸೌಲಭ್ಯಗಳನ್ನು ದೇವಸ್ಥಾನದಲ್ಲಿ ಅಭಿವೃದ್ಧಿಪಡಿಸಲಾಗುವುದು. ಇದರಿಂದಾಗಿ ದೇವಸ್ಥಾನಕ್ಕೆ ಭೇಟಿ ನೀಡುವ ಹೆಚ್ಚಿನ ಸಂಖ್ಯೆಯ ಭಕ್ತರಿಗೆ ಅನುಕೂಲವಾಗಲಿದೆ’ ಎಂದು ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.
ಸಿಂಗ್ ಅವರ ಪೋಸ್ಟ್‌ಗೆ ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ‘ಪ್ರಸಾದ್ (PRASHAD) ಯೋಜನೆ ಅಡಿಯಲ್ಲಿ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದ ಅಭಿವೃದ್ಧಿ ಯೋಜನೆಗೆ ಅನುಮೋದನೆ ನೀಡಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತು ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಧನ್ಯವಾದಗಳು. ಈ ಉಪಕ್ರಮವು ತೀರ್ಥಯಾತ್ರೆಯ ಅನುಭವವನ್ನು ಹೆಚ್ಚಿಸುತ್ತದೆ ಮತ್ತು ಸಾವಿರಾರು ಭಕ್ತರಿಗೆ ಆಧುನಿಕ ಸೌಲಭ್ಯಗಳನ್ನು ಒದಗಿಸುತ್ತದೆ’ ಎಂದು ‘ಎಕ್ಸ್’ನಲ್ಲಿ ಬರೆದುಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.