ADVERTISEMENT

ಆನಂದ ಮಾಮನಿ ಪತ್ನಿಗೇ ಸವದತ್ತಿ ಟಿಕೆಟ್‌: ಸಿ.ಎಂ ಬಸವರಾಜ ಬೊಮ್ಮಾಯಿ ಭರವಸೆ

​ಪ್ರಜಾವಾಣಿ ವಾರ್ತೆ
Published 2 ಡಿಸೆಂಬರ್ 2022, 17:38 IST
Last Updated 2 ಡಿಸೆಂಬರ್ 2022, 17:38 IST
ರತ್ನಾ ಮಾಮನಿ
ರತ್ನಾ ಮಾಮನಿ   

ರಾಮದುರ್ಗ (ಬೆಳಗಾವಿ): ಇತ್ತೀಚೆಗೆ ನಿಧನರಾದ ವಿಧಾನಸಭೆ ಉಪಸಭಾಧ್ಯಕ್ಷ, ಸವದತ್ತಿ ಶಾಸಕ ಆನಂದ ಮಾಮನಿ ಅವರ ಪತ್ನಿ ರತ್ನಾ ಅವರಿಗೆ ಬಿಜೆಪಿ ಟಿಕೆಟ್‌ ನೀಡುವ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ.

ತಾಲ್ಲೂಕಿನ ದೊಡ್ಡಮಂಗಡಿಯಲ್ಲಿ ಬಸವೇಶ್ವರರ ಪುತ್ಥಳಿ ಅನಾವರಣ ಮಾಡಿದ ಬಳಿಕ ರತ್ನಾ ಮಾಮನಿ ಅವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ‘ನಿಮ್ಮ ವಿಚಾರವಾಗಿ ದೆಹಲಿಯಲ್ಲಿ ಮಾತನಾಡಿದ್ದೇನೆ. ಕಾಳಜಿ ಮಾಡಬೇಡಿ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT