ADVERTISEMENT

‘ನರೇಗಾ ಉಳಿಸಿ’ ಹೋರಾಟ: ರೂಪುರೇಷೆಗಳ ಕುರಿತು ಚರ್ಚಿಸಲು ಜ. 8ಕ್ಕೆ ಸಭೆ– ಡಿಕೆಶಿ

​ಪ್ರಜಾವಾಣಿ ವಾರ್ತೆ
Published 5 ಜನವರಿ 2026, 20:36 IST
Last Updated 5 ಜನವರಿ 2026, 20:36 IST
ಡಿ.ಕೆ. ಶಿವಕುಮಾರ್
ಡಿ.ಕೆ. ಶಿವಕುಮಾರ್   

ಬೆಂಗಳೂರು: ‘ನರೇಗಾ ಉಳಿಸಿ ಹೋರಾಟದ ರೂಪುರೇಷೆಗಳ ಕುರಿತು ಚರ್ಚಿಸಲು ಇದೇ 8ರಂದು ಪಕ್ಷದ ಎಲ್ಲ ಶಾಸಕರು, ಪರಿಷತ್ ಸದಸ್ಯರು ಮತ್ತು ಸಂಸದರ ಸಭೆ ಕರೆಯಲಾಗಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

‘ಲಲಿತ್‌ ಅಶೋಕ ಹೋಟೆಲ್‌ನಲ್ಲಿ ಸಂಜೆ 6 ಗಂಟೆಗೆ ನಡೆಯಲಿರುವ ಈ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷರು, ಉಸ್ತುವಾರಿ ಎಐಸಿಸಿ ಕಾರ್ಯದರ್ಶಿಗಳು ಭಾಗವಹಿಸಲಿದ್ದಾರೆ’ ಎಂದಿದ್ದಾರೆ.

‘ಯುಪಿಎ ಸರ್ಕಾರ ಜಾರಿಗೆ ತಂದಿದ್ದ ನರೇಗಾ ಕಾಯ್ದೆಯು ಗ್ರಾಮೀಣ ಭಾಗದ ಕಾರ್ಮಿಕ ವರ್ಗಕ್ಕೆ ಜೀವನದ ಆಸರೆಯಾಗಿತ್ತು. ಈ ಕಾಯ್ದೆಯ ಹೆಸರು ಮತ್ತು ಮೂಲ ಆಶಯಗಳನ್ನು ಬದಲಿಸಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ, ಗ್ರಾಮೀಣ ಜನರಿಗೆ ಅನ್ಯಾಯ ಮಾಡಿದೆ. ನರೇಗಾ ಯೋಜನೆಯ ಮೂಲ ಸ್ವರೂಪವನ್ನು ಮರುಸ್ಥಾಪಿಸಬೇಕೆಂದು ಆಗ್ರಹಿಸಿ ದೇಶದಾದ್ಯಂತ ಪಕ್ಷವು ‘ನರೇಗಾ ಬಚಾವೊ ಸಂಗ್ರಾಮ’ ಕೈಗೊಳ್ಳಲು ನಿರ್ಧರಿಸಿದೆ. ಈ ಹೋರಾಟದ ಕುರಿತು ಚರ್ಚಿಸಲು ಈ ಸಭೆ ಆಯೋಜಿಸಲಾಗಿದೆ’ ಎಂದೂ ಅವರು ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.