ADVERTISEMENT

ಕಾಂಗ್ರೆಸ್‌ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ‘ಬಲಗೈ’ ಪ್ರಾಬಲ್ಯ

​ಪ್ರಜಾವಾಣಿ ವಾರ್ತೆ
Published 25 ಮಾರ್ಚ್ 2023, 18:06 IST
Last Updated 25 ಮಾರ್ಚ್ 2023, 18:06 IST
   

ಬೆಂಗಳೂರು: ರಾಜ್ಯದಲ್ಲಿ ಪರಿಶಿಷ್ಟ ಜಾತಿಯ 36 ಮೀಸಲು ಕ್ಷೇತ್ರಗಳಿವೆ. ಮೊದಲ ಪಟ್ಟಿಯಲ್ಲಿ 22 ಕ್ಷೇತ್ರಗಳಿಗೆ ಹುರಿಯಾಳುಗಳನ್ನು ಘೋಷಿಸಲಾಗಿದೆ. ಈ ಪೈಕಿ, ಬಲಗೈ ಒಳ ಪಂಗಡದ 12, ಎಡಗೈ ಒಳ ಪಂಗಡದ ನಾಲ್ವರು, ಲಂಬಾಣಿ ಸಮುದಾಯದ ನಾಲ್ವರು ಹಾಗೂ ಬೋವಿ ಸಮುದಾಯದ ಇಬ್ಬರಿಗೆ ಅವಕಾಶ ನೀಡಲಾಗಿದೆ.

‘ಎಡಗೈ ಒಳ ಪಂಗಡದ ಮುಖಂಡರಿಗೆ 14 ಕ್ಷೇತ್ರಗಳಲ್ಲಿ ಅವಕಾಶ ನೀಡುವಂತೆ ಹೈಕಮಾಂಡ್‌ಗೆ ಮನವಿ ಮಾಡಿದ್ದೆವು. ಈಗ ನಾಲ್ಕು ಕ್ಷೇತ್ರಗಳಲ್ಲಿ ಅವಕಾಶ ನೀಡಿದ್ದಾರೆ. ಎರಡನೇ ಹಾಗೂ ಮೂರನೇ ಪಟ್ಟಿಯಲ್ಲಿ ಇನ್ನಷ್ಟು ಮಂದಿಗೆ ಅವಕಾಶ ಸಿಗುವ ನಿರೀಕ್ಷೆ ಇದೆ. ಕಳೆದ ಬಾರಿಗಿಂತ ಹೆಚ್ಚಿನ ಮಂದಿಗೆ ಟಿಕೆಟ್‌ ಸಿಗಲಿದೆ’ ಎಂದು ಸಮುದಾಯದ ಮುಖಂಡರಾದ ಎಲ್‌.ಹನುಮಂತಯ್ಯ ಹಾಗೂ ಎಚ್‌.ಆಂಜನೇಯ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT