ADVERTISEMENT

ಬಡ್ತಿ ಮೀಸಲಾತಿ ಕಾಯ್ದೆಗೆ ಸುಪ್ರೀಂ ಅಸ್ತು: ಸ್ವಾಗತಾರ್ಹ

​ಪ್ರಜಾವಾಣಿ ವಾರ್ತೆ
Published 10 ಮೇ 2019, 7:16 IST
Last Updated 10 ಮೇ 2019, 7:16 IST
ಪ್ರಿಯಾಂಕ್ ಖರ್ಗೆ
ಪ್ರಿಯಾಂಕ್ ಖರ್ಗೆ    

ಕಲಬುರ್ಗಿ: ಬಡ್ತಿ ಮೀಸಲಾತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ನೂತನ ಕಾಯ್ದೆಯನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿರುವುದು ಸ್ವಾಗತಾರ್ಹ ಎಂದು ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ಸುಪ್ರೀಂಕೋರ್ಟ್ ಆದೇಶದಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ನೌಕರರಿಗೆ ನ್ಯಾಯ ಸಿಕ್ಕಂತಾಗಿದೆ. ಉಳಿದ ಜನಾಂಗದವರಿಗೂ ಅನ್ಯಾಯವಾಗದಂತೆ ನೋಡಿಕೊಳ್ಳಲಾಗುವುದು. ಹೊಸ ಹುದ್ದೆ ಸೃಷ್ಟಿ, ಇತರರಿಗೆ ಯಾವ ರೀತಿಯಲ್ಲೂ ತೊಂದರೆ ಆಗದಂತೆ ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಕಾಂಗ್ರೆಸ್ ಪ್ರಚಾರ ಸಭೆ ಆರಂಭ
ಕಲಬುರ್ಗಿ:
ಚಿಂಚೋಳಿ ತಾಲ್ಲೂಕು ಕುಂಚಾವರಂನಲ್ಲಿ ಕಾಂಗ್ರೆಸ್ ಪ್ರಚಾರ ಸಭೆ ಆರಂಭವಾಗಿದೆ.

ಕಾಂಗ್ರೆಸ್ ಅಭ್ಯರ್ಥಿ ಸುಭಾಷ ರಾಠೋಡ ಪರ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ, ಗೃಹ ಸಚಿವ ಎಂ.ಬಿ.ಪಾಟೀಲ, ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಮತಯಾಚಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.