ನವದೆಹಲಿ: ‘ಮೀಸಲಾತಿ ಆಧಾರದ ಮೇಲೆ ಬಡ್ತಿ ಹೊಂದಿರುವ ಸರ್ಕಾರಿ ನೌಕರರಿಗೆ ತತ್ಪರಿಣಾಮ ಜ್ಯೇಷ್ಠತೆ ವಿಸ್ತರಿಸುವ’ ರಾಜ್ಯ ಸರ್ಕಾರದ ನೂತನ ಕಾಯ್ದೆಯ ಸಿಂಧುತ್ವ ಪ್ರಶ್ನಿಸಿ ಬಿ.ಕೆ. ಪವಿತ್ರ ಮತ್ತಿತರರು ಸಲ್ಲಿಸಿದ್ದ ಮೇಲ್ಮನವಿ ಕುರಿತ ತೀರ್ಪನ್ನು ಸುಪ್ರೀಂ ಕೋರ್ಟ್ ಶುಕ್ರವಾರ ಬೆಳಿಗ್ಗೆ ಪ್ರಕಟಿಸಲಿದೆ.
ನ್ಯಾಯಮೂರ್ತಿಗಳಾದ ಯು. ಯು. ಲಲಿತ್ ಹಾಗೂ ಡಿ.ವೈ. ಚಂದ್ರಚೂಡ್ ಅವರಿದ್ದ ಪೀಠವು 2018ರ ಅಕ್ಟೋಬರ್ 23ರಿಂದ ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿ ಕಳೆದ ಮಾರ್ಚ್ 6ರಂದು ತೀರ್ಪು ಕಾದಿರಿಸಿತ್ತು.
ಸರ್ಕಾರಿ ನೌಕರರ ಬಡ್ತಿಯಲ್ಲಿ ಮೀಸಲಾತಿ ವಿಧಾನ ಅನುಸರಿಸುವ ರಾಜ್ಯ ಸರ್ಕಾರದ 2002ರ ಕಾಯ್ದೆಯನ್ನು ರದ್ದುಪಡಿಸಿ ಸುಪ್ರೀಂ ಕೋರ್ಟ್ 2017ರ ಫೆಬ್ರುವರಿ 9ರಂದು ತೀರ್ಪು ನೀಡಿದ್ದ ಹಿನ್ನೆಲೆಯಲ್ಲಿ, ಪರಿಶಿಷ್ಟ ಜಾತಿ ಮತ್ತು ಪಂಗಡಗಳ ನೌಕರರ ಹಿತಾಸಕ್ತಿ ಕಾಪಾಡಲು ರಾಜ್ಯ ಸರ್ಕಾರ ಹೊಸ ಕಾಯ್ದೆ ರೂಪಿಸಿತ್ತು.ಈ ನೂತನ ಕಾಯ್ದೆಗೆ ರಾಷ್ಟ್ರಪತಿಯವರ ಅಂಕಿತ ದೊರೆತಿತ್ತು. ಈ ಕಾಯ್ದೆಯ ಸಿಂಧುತ್ವ ಪ್ರಶ್ನಿಸಿ ಬಿ.ಕೆ. ಪವಿತ್ರ ಮತ್ತಿತರರು ಮೇಲ್ಮನವಿ ಸಲ್ಲಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.