ನವದೆಹಲಿ: ಮೀಸಲಾತಿ ಆಧಾರದ ಮೇಲೆ ಬಡ್ತಿ ಹೊಂದಿರುವ ಸರ್ಕಾರಿ ನೌಕರರಿಗೆ ತತ್ಪರಿಣಾಮ ಜ್ಯೇಷ್ಠತೆ ವಿಸ್ತರಿಸುವ ರಾಜ್ಯ ಸರ್ಕಾರದ ನೂತನ ಕಾಯ್ದೆಯನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿದೆ.
ಕಾಯ್ದೆಯ ಸಿಂಧುತ್ವವನ್ನು ಪ್ರಶ್ನಿಸಿ ಬಿ.ಕೆ. ಪವಿತ್ರ ಮತ್ತಿತರರು ಸಲ್ಲಿಸಿದ್ದ ಮೇಲ್ಮನವಿ ಕುರಿತ ತೀರ್ಪನ್ನು ಶುಕ್ರವಾರ ಬೆಳಿಗ್ಗೆ ಪ್ರಕಟಿಸಿದ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್, ‘ಶಾಸನಸಭೆಯು ರೂಪಿಸಿರುವ ನೂತನ ಕಾಯ್ದೆಗೆ ರಾಷ್ಟ್ರಪತಿಯವರು ಅಂಕಿತ ದೊರೆತಿದ್ದು, ಅದರ ಸಿಂಧುತ್ವಕ್ಕೆ ಪೂರಕ’ ಎಂದು ಅಭಿಪ್ರಾಯಪಟ್ಟರು.
ಕೆನೆ ಪದರದ ತತ್ವವೂ ಸಹ ಈ ಕಾಯ್ದೆಯ ಜಾರಿಯಲ್ಲಿ ಅನ್ವಯವಾಗದು. ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿರುವ ಗ್ರೂಪ್ ಡಿ ಹಂತದ ಸಿಬ್ಬಂದಿಗೆ ಮೀಸಲಾತಿ ನೀಡುವಾಗ ಮಾತ್ರ ಈ ತತ್ವ ಅನ್ವಯಿಸಬಹುದು. ಆದರೆ, ತತ್ಪರಿಣಾಮದ ಜ್ಯೇಷ್ಠತೆ ವಿಸ್ತರಿಸುವ ಕಾಯ್ದೆ ಆಗಿರುವುದರಿಂದ ಕೇವಲ ಉನ್ನತ ಮಟ್ಟದ ಅಧಿಕಾರಿಗಳು ಇದರ ಲಾಭ ಪಡೆಯುವುದರಿಂದ ಕಾಯ್ದೆಯನ್ನು ಮಾನ್ಯ ಮಾಡಲಾಗಿದೆ ಎಂದು ತೀರ್ಪು ಪ್ರಕಟಿಸಿದ ನ್ಯಾಯಮೂರ್ತಿ ಚಂದ್ರಚೂಡ್ ತಿಳಿಸಿದರು.
ಇದನ್ನೂ ಓದಿ...ಬಡ್ತಿ ಮೀಸಲಾತಿ: ಇಂದು ‘ಸುಪ್ರೀಂ’ ತೀರ್ಪು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.