ADVERTISEMENT

ಎಸ್‌ಸಿ/ಎಸ್‌ಟಿ ನೌಕರರ ಒಕ್ಕೂಟದ ಮೇಲ್ಮನವಿ

ಬಡ್ತಿ ಮೀಸಲಾತಿ ಕಾಯ್ದೆ ಜಾರಿಗೆ ನಿರ್ದೇಶನ

​ಪ್ರಜಾವಾಣಿ ವಾರ್ತೆ
Published 22 ಅಕ್ಟೋಬರ್ 2018, 17:47 IST
Last Updated 22 ಅಕ್ಟೋಬರ್ 2018, 17:47 IST

ನವದೆಹಲಿ: ‘ಮೀಸಲಾತಿ ಆಧಾರದ ಮೇಲೆ ಬಡ್ತಿ ಹೊಂದಿರುವ ಸರ್ಕಾರಿ ನೌಕರರಿಗೆ ತತ್ಪರಿಣಾಮ ಜ್ಯೇಷ್ಠತೆ ವಿಸ್ತರಿಸುವ’ ರಾಜ್ಯ ಸರ್ಕಾರದ ನೂತನ ಕಾಯ್ದೆಯ ಜಾರಿಗೆ ನಿರ್ದೇಶನ ನೀಡುವಂತೆ ಕೋರಿ ರಾಜ್ಯ ಸರ್ಕಾರಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ(ಎಸ್‌ಸಿ/ಎಸ್‌ಟಿ) ನೌಕರರ ಒಕ್ಕೂಟ ಸೋಮವಾರ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದೆ.

ಐವರು ನ್ಯಾಯಮೂರ್ತಿಗಳ ನೇತೃತ್ವದ ಸಂವಿಧಾನ ಪೀಠವು ಕಳೆದ ಸೆಪ್ಟೆಂಬರ್‌ 26ರಂದು ಎಂ. ನಾಗರಾಜ್ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಪು ನೀಡಿದ್ದರಿಂದ, ಈ ಕುರಿತು ವಿಚಾರಣೆ ನಡೆಸುವ ಅಗತ್ಯವಿಲ್ಲ ಎಂದು ನ್ಯಾಯಮೂರ್ತಿಗಳಾದ ಕುರಿಯನ್‌ ಜೋಸೆಫ್‌ ಹಾಗೂ ಎ.ಎಂ. ಖನ್ವಿಲ್ಕರ್‌ ಅವರಿದ್ದ ಪೀಠ ತಿಳಿಸಿತು.

ಆದರೆ, ‘ರಾಜ್ಯ ಸರ್ಕಾರದ ನೂತನ ಕಾಯ್ದೆಯ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆಯು ಬೇರೊಂದು ಪೀಠದೆದುರು ನಡೆದಿದೆ’ ಎಂದು ವಿಚಾರಣೆ ಇದೇ ವೇಳೆ ಹಾಜರಿದ್ದ ಹಿರಿಯ ವಕೀಲೆ ಇಂದಿರಾ ಜೈಸಿಂಗ್‌ ತಿಳಿಸಿದ್ದರಿಂದ, ಆ ಪ್ರಕರಣಗಳೊಂದಿಗೆ ಈ ಮೇಲ್ಮನವಿಯನ್ನೂ ವಿಚಾರಣೆಗೆ ಪರಿಗಣಿಸುವಂತೆ ನ್ಯಾಯಪೀಠ ಆದೇಶಿಸಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.