ADVERTISEMENT

ಪರಿಶಿಷ್ಟ ಜಾತಿಗಳ ಒಳಮೀಸಲಾತಿ: ಸಚಿವ ಸಂಪುಟದ ಉಪ ಸಮಿತಿ ರಚನೆ

​ಪ್ರಜಾವಾಣಿ ವಾರ್ತೆ
Published 13 ಡಿಸೆಂಬರ್ 2022, 7:55 IST
Last Updated 13 ಡಿಸೆಂಬರ್ 2022, 7:55 IST
   

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲಾತಿ ಪ್ರಮಾಣ ಹೆಚ್ಚಿಸಿದ ಬೆನ್ನಲ್ಲೇ ಒಳ ಮೀಸಲಾತಿ ಕೂಗು ಜೋರಾಗುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ, ಒಳಮೀಸಲಾತಿ ಕುರಿತು ಪರಿಶೀಲಿಸಿ ಸೂಕ್ತ ಶಿಫಾರಸು ಮಾಡಲು ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ. ಮಾಧುಸ್ವಾಮಿ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಉಪ ಸಮಿತಿ ರಚಿಸಿದೆ.

ನ. 17ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ, ಪರಿಶಿಷ್ಟ ಜಾತಿಗಳ ವರ್ಗೀಕರಣ (ಒಳಮೀಸಲಾತಿ) ಕುರಿತು ಸಂಪುಟ ಉಪ ಸಮಿತಿ ರಚಿಸಲು ನಿರ್ಣಯಿಸಲಾಗಿತ್ತು. ಆದರೆ, ಇದೀಗ ಒಳಮೀಸಲಾತಿ ಆಗ್ರಹಿಸಿ ಹೋರಾಟ ಆರಂಭವಾಗುತ್ತಿದ್ದಂತೆ ಸಂಪುಟ ಉಪ ಸಮಿತಿ ರಚಿಸಿ ಆದೇಶ ಹೊರಡಿಸಲಾಗಿದೆ.

ಜಲಸಂಪನ್ಮೂಲ ಸಚಿವ ಗೋವಿಂದ ಎಂ. ಕಾರಜೋಳ, ಮೀನುಗಾರಿಕೆ ಸಚಿವ ಎಸ್‌. ಅಂಗಾರ, ಪಶು ಸಂಗೋಪನೆ ಸಚಿವ ಪ್ರಭು ಚವ್ಹಾಣ್, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್‌ ಈ ಸಮಿತಿಯ ಸದಸ್ಯರು.

ADVERTISEMENT

ಈ ಸಮಿತಿಗೆ ಸಮಾಜ ಕಲ್ಯಾಣ ಇಲಾಖೆ ಅಗತ್ಯ ನೆರವು ನೀಡಬೇಕು ಎಂದೂ ಆದೇಶದಲ್ಲಿ ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.