ADVERTISEMENT

ಎಸ್‌ಟಿ ಮೀಸಲು: ಬೊಮ್ಮಾಯಿ ನೇತೃತ್ವದಲ್ಲಿ ಇಂದು ಶಾಸಕರ ಸಭೆ

​ಪ್ರಜಾವಾಣಿ ವಾರ್ತೆ
Published 22 ಮಾರ್ಚ್ 2022, 19:31 IST
Last Updated 22 ಮಾರ್ಚ್ 2022, 19:31 IST
ಬಸವರಾಜ ಬೊಮ್ಮಾಯಿ ನೇತೃತ್ವ
ಬಸವರಾಜ ಬೊಮ್ಮಾಯಿ ನೇತೃತ್ವ   

ಬೆಂಗಳೂರು: ಪರಿಶಿಷ್ಟ ಪಂಗಡದ ಮೀಸಲಾತಿ ಪ್ರಮಾಣವನ್ನು ಶೇ 3 ರಿಂದ ಶೇ 7.5ಕ್ಕೆ ಹೆಚ್ಚಿಸುವ ಬೇಡಿಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಂಗಳವಾರ ಸಭೆ ನಡೆಯಿತು.

ಈ ಸಭೆಯಲ್ಲಿ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ, ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ. ಶ್ರೀರಾಮುಲು, ಶಾಸಕ ಬಿ.ಎಸ್‌.ಯಡಿಯೂರಪ್ಪ ಭಾಗವಹಿಸಿದ್ದರು. ಈಕುರಿತು ಚರ್ಚಿಸಲು ಅಧಿಕಾರಿಗಳು ಮತ್ತು ಸಮುದಾಯದ ಶಾಸಕರ ಸಭೆಯನ್ನುಬುಧವಾರ ನಿಗದಿ ಮಾಡಲಾಗಿದ್ದು, ಸರ್ಕಾರ ನಿಲುವು ಏನಾಗಿರಬೇಕು ಎಂಬ ಬಗ್ಗೆ ಚರ್ಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಮೀಸಲಾತಿ ಹೆಚ್ಚಳಕ್ಕೆ ಒತ್ತಾಯಿಸಿವಾಲ್ಮೀಕಿ ಪ್ರಸನ್ನಾನಂದಪುರಿ ಸ್ವಾಮೀಜಿ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ 40 ದಿನಗಳಿಂದ ಹೋರಾಟ ನಡೆಸುತ್ತಿದ್ದಾರೆ. ಸ್ವಾಮೀಜಿಯವರ ಮನವೊಲಿಸಲು ಸರ್ಕಾರ ಮುಂದಾಗಬೇಕು ಎಂದು ಯಡಿಯೂರಪ್ಪ ಅವರು ಸಲಹೆ ನೀಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.