ADVERTISEMENT

ಅರ್ಜಿ ಸಲ್ಲಿಕೆ ಗಡುವು ಡಿ.31ಕ್ಕೆ ವಿಸ್ತರಣೆ

ವಿದ್ಯಾರ್ಥಿವೇತನ: ಎಸ್‌ಎಸ್‌ಪಿ ಸರ್ವರ್‌ ಸಮಸ್ಯೆ

​ಪ್ರಜಾವಾಣಿ ವಾರ್ತೆ
Published 23 ನವೆಂಬರ್ 2019, 20:09 IST
Last Updated 23 ನವೆಂಬರ್ 2019, 20:09 IST

ಬೆಂಗಳೂರು: ವಿದ್ಯಾರ್ಥಿವೇತನ ಅರ್ಜಿಯನ್ನು ಸ್ಟೇಟ್‌ ಸ್ಕಾಲರ್‌ಶಿಪ್‌ ಪೋರ್ಟಲ್‌ನಲ್ಲಿ (ಎಸ್ಎಸ್‌ಪಿ) ಅಪ್‌ ಲೋಡ್ ಮಾಡಲು, ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಡಿಸೆಂಬರ್‌ 31ಕ್ಕೆ ವಿಸ್ತರಿಸಲಾಗಿದೆ.

ಸರ್ವರ್‌ ಸಮಸ್ಯೆಯಿಂದಾಗಿ ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತ ಸಮುದಾಯದ ಸುಮಾರು 15 ಲಕ್ಷದಷ್ಟು ವಿದ್ಯಾರ್ಥಿಗಳಿಗೆ ತೊಂದರೆ ಆಗಿತ್ತು. ನವೆಂಬರ್‌ 30ರೊಳಗೆ ಅರ್ಜಿ ಸಲ್ಲಿಕೆಗೆ ಗಡುವು ನೀಡಿದ್ದು, ಇದರಿಂದಾಗಿ ವಿದ್ಯಾರ್ಥಿಗಳು ಗೊಂದಲಕ್ಕೆ ಒಳಗಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT