ADVERTISEMENT

1ನೇ ತರಗತಿಗೆ ದಾಖಲಾತಿ: ಇದೊಂದು ಸಾಲಿಗೆ 5ವರ್ಷ 5 ತಿಂಗಳಿಗೂ ಪ್ರವೇಶ

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2025, 11:32 IST
Last Updated 16 ಏಪ್ರಿಲ್ 2025, 11:32 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಬೆಂಗಳೂರು: ಮಕ್ಕಳಿಗೆ ಜೂನ್‌ 1ಕ್ಕೆ 5 ವರ್ಷ 5 ತಿಂಗಳು ತುಂಬಿದ್ದರೆ ಸಾಕು 2025–26ನೇ ಸಾಲಿನಲ್ಲಿ ಒಂದನೇ ತರಗತಿಗೆ ಪ್ರವೇಶ ಪಡೆಯಬಹುದು.

ಸುದ್ದಿಗೋಷ್ಠಿಯಲ್ಲಿ ಈ ಕುರಿತು ಸರ್ಕಾರದ ನಿರ್ಧಾರವನ್ನು ಪ್ರಕಟಿಸಿದ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ, ರಾಜ್ಯ ಶಿಕ್ಷಣ ನೀತಿ ಆಯೋಗದ ಸಲಹೆ ಹಾಗೂ ಪೋಷಕರ ಮನವಿ ಪರಿಗಣಿಸಿ ಇದೊಂದು ಶೈಕ್ಷಣಿಕ ವರ್ಷಕ್ಕೆ ಮಾತ್ರ ವಯೋಮಿತಿ ಸಡಿಲಗೊಳಿಸಲಾಗಿದೆ. ಆದರೆ, ಅಂತಹ ಮಕ್ಕಳು ಎಲ್‌ಕೆಜಿ, ಯುಕೆಜಿ, ಅಂಗನವಾಡಿ ಸೇರಿದಂತೆ ಯಾವುದೇ ಪೂರ್ವಪ್ರಾಥಮಿಕ ಶಿಕ್ಷಣವನ್ನು ಪೂರ್ಣಗೊಳಿಸಿರಬೇಕು. ಪೂರ್ವಪ್ರಾಥಮಿಕ ಶಿಕ್ಷಣ ಪಡೆಯದೆ ನೇರವಾಗಿ ಒಂದನೇ ತರಗತಿಗೆ ಪ್ರವೇಶ ಪಡೆಯುವ ಮಕ್ಕಳಿಗೆ 6 ವರ್ಷದ ನಿಯಮ ಕಡ್ಡಾಯ ಎಂದು ಮಾಹಿತಿ ನೀಡಿದರು.

ADVERTISEMENT

ಮುಂದಿನ ಶೈಕ್ಷಣಿಕ ವರ್ಷಕ್ಕೆ ಈ ವಿನಾಯಿತಿ ಇರುವುದಿಲ್ಲ. ರಾಜ್ಯ ಶಿಕ್ಷಣ ನೀತಿ ಆಯೋಗದ ಶಿಫಾರಸುಗಳನ್ನು ಆಧರಿಸಿ ನಿಯಮಗಳನ್ನು ಅನುಸರಿಸಲಾಗುವುದು ಎಂದು ಸ್ಪಷ್ಟಪಡಿಸಿದರು.

ಶಾಲಾ ಶಿಕ್ಷಣ ಇಲಾಖೆ 2022ರ ನವೆಂಬರ್‌ನಲ್ಲಿ ಹೊರಡಿಸಿದ ಆದೇಶದ ಪ್ರಕಾರ, ಜೂನ್ 1, 2025ರ ಒಳಗೆ ಆರು ವರ್ಷಗಳನ್ನು ಪೂರ್ಣಗೊಳಿಸಿದ ಮಕ್ಕಳು 2025-26 ಶೈಕ್ಷಣಿಕ ವರ್ಷಕ್ಕೆ ಒಂದನೇ ತರಗತಿಗೆ ಪ್ರವೇಶ ಪಡೆಯಲು ಅರ್ಹರಾಗಿರುತ್ತಾರೆ. ಇದರಿಂದ ಸಾವಿರಾರು ಮಕ್ಕಳ ಪ್ರವೇಶಕ್ಕೆ ಅಡ್ಡಿಯಾಗಿದೆ. ಮೊದಲು ಇದ್ದಂತೆ ಪೋಷಕರ ಇಚ್ಛೆಗೆ ಅನುಗುಣವಾಗಿ ಶಾಲೆಗೆ ಸೇರಿಸಲು ವಯೋಮಿತಿ ಸಡಿಲಿಕೆಯ ಅವಕಾಶ ನೀಡಬೇಕು ಎಂದು ಹಲವು ಪೋಷಕರು ಮನವಿ ಮಾಡಿದ್ದರು. 

ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಪೋಷಕರ ವಿನಂತಿಯನ್ನು ಆಯೋಗದ ಗಮನಕ್ಕೆ ತಂದಿದ್ದರು. ಆಯೋಗದ ಶಿಫಾರಸಿನಂತೆ ಒಂದು ವರ್ಷಕ್ಕೆ ಸೀಮಿತಗೊಳಿಸಿ, ವಯೋಮಿತಿ ಸಡಿಲಿಕೆ ಅವಕಾಶ ನೀಡಿದ್ದಾರೆ.

Age realaxation order.pdf
ಓಪನ್ ಮಾಡಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.