ADVERTISEMENT

ಅ.15ವರೆಗೆ ಶಾಲೆ– ಕಾಲೇಜು ಇಲ್ಲ

​ಪ್ರಜಾವಾಣಿ ವಾರ್ತೆ
Published 30 ಸೆಪ್ಟೆಂಬರ್ 2020, 17:55 IST
Last Updated 30 ಸೆಪ್ಟೆಂಬರ್ 2020, 17:55 IST
   

ಬೆಂಗಳೂರು: ಕೋವಿಡ್‌ ಹರಡುತ್ತಿರುವ ಕಾರಣ ಸರ್ಕಾರಿ, ಅನುದಾನಿತ, ಅನುದಾನರಹಿತ ಶಾಲಾ ಕಾಲೇಜುಗಳನ್ನು ಅ. 15ರವರೆಗೆ ತೆರೆಯದಿರಲು ಸಾರ್ವಜನಿಕ ಶಿಕ್ಷಣ ಇಲಾಖೆ ನಿರ್ಧರಿಸಿದೆ.

ಈ ಸಂಬಂಧ ಸುತ್ತೋಲೆ ಹೊರಡಿಸಿರುವ ಇಲಾಖೆಯ ಆಯುಕ್ತ, ‘ಕೋವಿಡ್‌ ಹಬ್ಬುತ್ತಿರುವ ಪ್ರಮಾಣ ಕಡಿಮೆ ಆಗಿಲ್ಲ. ಹೀಗಾಗಿ, ಸದ್ಯದ ಪರಿಸ್ಥಿತಿಯಲ್ಲಿ ಶಾಲೆಗಳಿಗೆ ವಿದ್ಯಾರ್ಥಿಗಳು ಬರುವುದು ಕ್ಷೇಮಕರ ಅಲ್ಲ ಎಂಬ ಕಾರಣಕ್ಕೆ ತೀರ್ಮಾನ ಕೈಗೊಳ್ಳಲಾಗಿದೆ’ ಎಂದೂ ತಿಳಿಸಿದ್ದಾರೆ.

‘ಮುಂದಿನ ದಿನಗಳಲ್ಲಿ ಪರಿಸ್ಥಿತಿ ಅವಲೋಕಿಸಿ ಶಾಲೆ, ಕಾಲೇಜುಗಳನ್ನು ಆರಂಭಿಸುವ ಬಗ್ಗೆ ತೀರ್ಮಾನಿಸಲಾಗುವುದು’ ಎಂದೂ ಅವರು ಸ್ಪಷ್ಟಪಡಿಸಿದ್ದಾರೆ.

ADVERTISEMENT

ಕಂಟೈನ್‌ಮೆಂಟ್‌ ಪ್ರದೇಶ ಹೊರತುಪಡಿಸಿ 9ನೇ ತರಗತಿಯಿಂದ 12ನೇ ತರಗತಿಯವರೆಗಿನ ವಿದ್ಯಾರ್ಥಿಗಳು ಸೆ. 21ರಿಂದ ಶಾಲೆಗಳಿಗೆ ಬಂದು ಸಂದೇಹ ‍ಪರಿಹರಿಸಿಕೊಳ್ಳಬಹುದು ಎಂದು ಕೇಂದ್ರ ಸರ್ಕಾರ ಆ. 29ರ ಮಾರ್ಗಸೂಚಿಯಲ್ಲಿ ತಿಳಿಸಿತ್ತು. ಆದರೆ, ಸೆಪ್ಟೆಂಬರ್‌ ಅಂತ್ಯದವರೆಗೆ ಶಾಲಾ ಕಾಲೇಜುಗಳ ತೆರೆಯದಿರಲು ರಾಜ್ಯದ ಶಿಕ್ಷಣ ಇಲಾಖೆ ಸೆ. 19ರಂದು ನಿರ್ದೇಶನ ನೀಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.