ADVERTISEMENT

ಶಾಲಾ ಶಿಕ್ಷಣ: ಗ್ರೂಪ್‌ ಸಿ,ಡಿ ವರ್ಗಾವಣೆಗೆ ಕೌನ್ಸೆಲಿಂಗ್‌

​ಪ್ರಜಾವಾಣಿ ವಾರ್ತೆ
Published 2 ಜೂನ್ 2025, 23:30 IST
Last Updated 2 ಜೂನ್ 2025, 23:30 IST
<div class="paragraphs"><p>ವರ್ಗಾವಣೆ</p></div>

ವರ್ಗಾವಣೆ

   

ಬೆಂಗಳೂರು: ಗ್ರೂಪ್‌ ‘ಸಿ’ ಮತ್ತು ‘ಡಿ’ ನೌಕರರ ವರ್ಗಾವಣೆಯನ್ನು ಕೌನ್ಸೆಲಿಂಗ್‌ ಮೂಲಕ ನಡೆಸಲು ಶಾಲಾ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.

ಕೌನ್ಸೆಲಿಂಗ್‌ ಮೂಲಕ ವರ್ಗಾವಣೆ ನಡೆಸಲು ಈಗಾಗಲೇ ಇಲಾಖೆ ತಂತ್ರಾಂಶವನ್ನು ಅಭಿವೃದ್ಧಿಪಡಿಸಿದೆ. ಈ ತಂತ್ರಾಂಶ ಬಳಸಿಕೊಂಡು ಆಯಾ ವಿಭಾಗಗಳ ವ್ಯಾಪ್ತಿಯಲ್ಲಿ ‘ಸಿ’ ಮತ್ತು ‘ಡಿ’ ನೌಕರರ ವರ್ಗಾವಣೆ ಪ್ರಕ್ರಿಯೆಯನ್ನು ಆನ್‌ಲೈನ್‌ ಮೂಲಕ ಆರಂಭಿಸಬೇಕು. ಪದವಿಪೂರ್ವ ಶಿಕ್ಷಣ ಇಲಾಖೆಯಲ್ಲೂ ಇದೇ ನಿಯಮ ಅನುಸರಿಸಬೇಕು. ಕೌನ್ಸೆಲಿಂಗ್‌ನಲ್ಲಿ ಭಾಗವಹಿಸಿದ ಎಲ್ಲರಿಗೂ ಸ್ಥಳದಲ್ಲೇ ವರ್ಗಾವಣೆ ಆದೇಶ ನೀಡಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ವಿ. ರಶ್ಮಿ ಮಹೇಶ್‌ ಸೂಚಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.