ADVERTISEMENT

ಕೋವಿಡ್-19 | ಶಾಲೆ ಆರಂಭ: ಮಹತ್ವದ ಸಭೆ ಇಂದು

​ಪ್ರಜಾವಾಣಿ ವಾರ್ತೆ
Published 22 ನವೆಂಬರ್ 2020, 20:50 IST
Last Updated 22 ನವೆಂಬರ್ 2020, 20:50 IST
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್‍ಕುಮಾರ್
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್‍ಕುಮಾರ್   

ಬೆಂಗಳೂರು: ಕೋವಿಡ್ ಕಾರಣದಿಂದ ಎಂಟು ತಿಂಗಳುಗಳಿನಿಂದ ಮುಚ್ಚಿರುವ ಶಾಲಾ– ಕಾಲೇಜುಗಳನ್ನು ಪುನರಾರಂಭಿಸುವ ಬಗ್ಗೆ ಸೋಮವಾರ (ನ. 23) ಮಧ್ಯಾಹ್ನ 12 ಗಂಟೆಗೆ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶಿಕ್ಷಣ ಇಲಾಖೆಯ ಸಚಿವರು ಮತ್ತು ಅಧಿಕಾರಿಗಳ ಜತೆ ಮಹತ್ವದ ಸಭೆ ನಡೆಸಲಿದ್ದಾರೆ.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್‍ಕುಮಾರ್, ಇಲಾಖೆಯ ಪ್ರಧಾನ ಕಾರ್ಯದರ್ಶಿ, ಆಯುಕ್ತರು, ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು ಸಭೆಯಲ್ಲಿ ಭಾಗವಹಿಸಲಿದ್ದು, ಶಾಲಾ ಕಾಲೇಜುಗಳನ್ನು ಆರಂಭಿಸಬೇಕೆ ಅಥವಾ ಇನ್ನು ಕೆಲವು ದಿನಗಳ ಮಟ್ಟಿಗೆ ಯಥಾಸ್ಥಿತಿಯಲ್ಲಿ ಮುಂದುವರೆಸಬೇಕೆ ಎಂಬುದರ ಕುರಿತಂತೆ ಸಭೆಯಲ್ಲಿ ಚರ್ಚೆ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT