ADVERTISEMENT

ಶಾಲಾ ಮಾನ್ಯತೆ: ಅಲ್ಪಸಂಖ್ಯಾತ ಇಲಾಖೆಗೆ ಹೈಕೋರ್ಟ್‌ ನಿರ್ದೇಶನ

​ಪ್ರಜಾವಾಣಿ ವಾರ್ತೆ
Published 29 ಸೆಪ್ಟೆಂಬರ್ 2025, 16:06 IST
Last Updated 29 ಸೆಪ್ಟೆಂಬರ್ 2025, 16:06 IST
ಹೈಕೋರ್ಟ್‌
ಹೈಕೋರ್ಟ್‌   

ಬೆಂಗಳೂರು: ‘ಮದರಸಾ ವತಿಯಿಂದ ಬೆಂಗಳೂರು ನಗರದಲ್ಲಿ ನಡೆಸಲಾಗುತ್ತಿರುವ ಶಾಲೆಯೊಂದರ ಮಾನ್ಯತೆಗೆ ಸಂಬಂಧಿಸಿದಂತೆ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿಗೆ ಅರ್ಜಿದಾರರು ಸಲ್ಲಿಸಿರುವ ಮನವಿ ಪರಿಶೀಲಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಿ’ ಎಂದು ಹೈಕೋರ್ಟ್‌, ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ.

ನಾಯಂಡಹಳ್ಳಿಯ ಅಬ್ದುಲ್‌ ಹಮೀದ್‌ ಪಾಷ ಸಲ್ಲಿಸಿದ್ದ ರಿಟ್‌ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದೆ.

‘ಈ ಪ್ರಕರಣದಲ್ಲಿ ಅರ್ಜಿದಾರರ ಆರೋಪಗಳ ಸತ್ಯಾಸತ್ಯತೆ ಕುರಿತು ನ್ಯಾಯಾಲಯ ಯಾವುದೇ ಅಭಿಪ್ರಾಯ ವ್ಯಕ್ತಪಡಿಸುವುದಿಲ್ಲ. ಆದಾಗ್ಯೂ, ಅರ್ಜಿದಾರರು 2025ರ ಜನವರಿ 25ರಂದು ಬೆಂಗಳೂರಿನ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿಗೆ ಸಲ್ಲಿಸಿರುವ ಮನವಿಯನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು’ ಎಂದು ನ್ಯಾಯಪೀಠ ಸರ್ಕಾರಕ್ಕೆ ನಿರ್ದೇಶಿಸಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.