ADVERTISEMENT

ಅಕ್ಟೋಬರ್‌ 1ರೊಳಗೆ ಶಾಲೆಗಳಲ್ಲಿ ಶೌಚಾಲಯ ಕಡ್ಡಾಯ

​ಪ್ರಜಾವಾಣಿ ವಾರ್ತೆ
Published 13 ಜುಲೈ 2019, 19:20 IST
Last Updated 13 ಜುಲೈ 2019, 19:20 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ರಾಜ್ಯದಲ್ಲಿರುವ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಅಕ್ಟೋಬರ್‌ 1ರೊಳಗೆ ಶೌಚಾಲಯಗಳು ನಿರ್ಮಾಣವಾಗಿರಬೇಕು ಎಂಬ ಸೂಚನೆಯನ್ನು ಮುಖ್ಯ ಕಾರ್ಯದರ್ಶಿ ನೀಡಿದ್ದು, ಇದರ ಹೊಣೆಯನ್ನು ಡಿಡಿಪಿಐಗಳಿಗೆ ವಹಿಸಲಾಗಿದೆ. ತಪ್ಪಿದಲ್ಲಿ ಶಿಸ್ತಿನ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಲಾಗಿದೆ.

ಸಾರ್ವಜನಿಕ ಶಿಕ್ಷಣ ಇಲಾಖೆ ಈಚೆಗೆ 2018–19ನೇ ಸಾಲಿನ ಶೈಕ್ಷಣಿಕ ವರದಿ ಪ್ರಕಟಿಸಿತ್ತು. ಅದರಲ್ಲಿ ಇನ್ನೂ 2,794 ಪ್ರಾಥಮಿಕಶಾಲೆಗಳಲ್ಲಿ ಬಾಲಕರಿಗೆಶೌಚಾಲಯಗಳಿಲ್ಲ ಹಾಗೂ 1,288 ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯಗಳಿಲ್ಲ ಎಂಬಮಾಹಿತಿಯೂ ಇತ್ತು. ಇದನ್ನು ಗಂಭೀರವಾಗಿ ಪರಿಗಣಿಸಿದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ ಭಾಸ್ಕರ್‌ ಈ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ.

ನರೇಗಾ ನಿಧಿಯನ್ನಾದರೂ ಬಳಸಿಕೊಂಡು ಶೌಚಾಲಯ ನಿರ್ಮಿಸಬೇಕು, ನೀರಿನ ವ್ಯವಸ್ಥೆ ಮಾಡಬೇಕು. ಈ ಬಗ್ಗೆ ತಮಗೆ ವರದಿ ಸಲ್ಲಿಸಬೇಕು ಎಂದು ಮುಖ್ಯ ಕಾರ್ಯದರ್ಶಿಯವರು ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇಲಾಖೆಯ ಆಯುಕ್ತರು ಎಲ್ಲ ಡಿಡಿಪಿಐಗಳಿಗೆ ಮಾಹಿತಿ ರವಾನಿಸಿ, ಕಾಮಗಾರಿಯ ಪ್ರಗತಿಯ ಬಗ್ಗೆ ತಿಳಿಯುವ ಸಲುವಾಗಿ ಪ್ರತಿ ಜಿಲ್ಲೆಯಲ್ಲಿ ವಾಟ್ಸ್‌ಆ್ಯಪ್‌ ಗುಂಪು ಮಾಡಿಕೊಳ್ಳಲು ಸೂಚಿಸಿದ್ದಾರೆ.

ADVERTISEMENT

ರಾಜ್ಯದಲ್ಲಿ 43,492 ಸರ್ಕಾರಿ ಪ್ರಾಥಮಿಕ ಶಾಲೆಗಳಿದ್ದು, 4,696 ಸರ್ಕಾರಿ ಪ್ರೌಢಶಾಲೆಗಳಿವೆ. ಪ್ರೌಢಶಾಲೆಗಳ ಪೈಕಿ 153ರಲ್ಲಿ ಬಾಲಕರಿಗೆ ಹಾಗೂ 64ರಲ್ಲಿ ಬಾಲಕಿಯರಿಗೆ ಶೌಚಾಲಯಗಳಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.