ADVERTISEMENT

ತರಾತುರಿಯಲ್ಲಿ ಶಾಲೆಗಳನ್ನು ತೆರೆಯುವುದಿಲ್ಲ: ಸಚಿವ ಎಸ್ ಸುರೇಶ್ ಕುಮಾರ್ ಸ್ಪಷ್ಟನೆ

​ಪ್ರಜಾವಾಣಿ ವಾರ್ತೆ
Published 16 ಮೇ 2020, 14:29 IST
Last Updated 16 ಮೇ 2020, 14:29 IST
ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್
ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್   

ಬೆಂಗಳೂರು: ತರಾತುರಿಯಲ್ಲಿ ನಮ್ಮ ರಾಜ್ಯದ ಶಾಲೆಗಳನ್ನು ತೆರೆಯುವುದಿಲ್ಲ. ಮಕ್ಕಳ ಹಿತ ಕಾಪಾಡುವ ಜವಾಬ್ದಾರಿ ನಮ್ಮದು. ರಾಜ್ಯದ ಶಾಲಾ ಮಕ್ಕಳ ಪೋಷಕರಿಗೆ ಒಂದು ಮಾಹಿತಿ ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಚಿವರು, ರಾಜ್ಯದ ಶಾಲಾ ಮಕ್ಕಳ ಪೋಷಕರಿಗೆ ಒಂದು ಮಾಹಿತಿ. ತರಾತುರಿಯಲ್ಲಿ ನಮ್ಮ ರಾಜ್ಯದ ಶಾಲೆಗಳನ್ನು ತೆರೆಯುವುದಿಲ್ಲ. ಮಕ್ಕಳ ಹಿತ ಕಾಪಾಡುವ ಜವಾಬ್ದಾರಿ ನಮ್ಮದು. ಮಾಧ್ಯಮಗಳಲ್ಲಿ ಬರುತ್ತಿರುವ ಕೆಲ ಮಾಹಿತಿಗಳು ಅಧಿಕೃತವಲ್ಲ. ಇನ್ನೂ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಮಾಧ್ಯಮಗಳಲ್ಲಿ ಬರುತ್ತಿರುವ ಕೆಲ ಮಾಹಿತಿಗಳು ಅಧಿಕೃತವಲ್ಲ. ಇನ್ನೂ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದು ಹೇಳಿದ್ದಾರೆ.

ಕೊರೊನಾ ವೈರಸ್ ವ್ಯಾಪಕವಾಗಿ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಈ ವರ್ಷ ಶಾಲಾ-ಕಾಲೇಜುಗಳು ಎಂದಿನಂತೆ ಜೂನ್‌ನಲ್ಲಿ ಆರಂಭವಾಗುವುದಿಲ್ಲ, ಆಗಸ್ಟ್‌ನಿಂದ ಪ್ರಾರಂಭವಾಗುತ್ತವೆ ಎಂದು ಕೆಲವು ಮಾಧ್ಯಮಗಳಲ್ಲಿ ವರದಿಯಾದ ಬಗ್ಗೆ ಸ್ಪಷ್ಟನೆ ನೀಡಿದ್ದ ಶಿಕ್ಷಣ ಸಚಿವ ಸುರೇಶ್ ಕುಮಾರ್, ಮೇ ನಂತರವೂ ಕೊರೊನಾ ನಿಯಂತ್ರಣಕ್ಕೆ ಬರುವುದು ಅನುಮಾನ, ಈ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳು ಇನ್ನು ಮೂರೂವರೆ ತಿಂಗಳು ಆರಂಭವಾಗುವುದಿಲ್ಲ, ಆಗಸ್ಟ್‌ಗೆ ಆರಂಭವಾಗುತ್ತವೆ ಎಂಬ ಸುದ್ದಿ ಸತ್ಯವಲ್ಲ, ಈ ರೀತಿಯ ನಿರ್ಧಾರವನ್ನು ಶಿಕ್ಷಣ ಇಲಾಖೆ ಕೈಗೊಂಡಿಲ್ಲ ಎಂದು ತಿಳಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.