ADVERTISEMENT

‘ಸೀಟ್‌ ಬ್ಲಾಕಿಂಗ್‌’ ದಂಧೆ: BMS ಎಂಜಿನಿಯರಿಂಗ್‌ ಕಾಲೇಜು ವಿರುದ್ಧ ಹಿಂದೆಯೂ ದೂರು

​ಪ್ರಜಾವಾಣಿ ವಾರ್ತೆ
Published 11 ಡಿಸೆಂಬರ್ 2024, 23:30 IST
Last Updated 11 ಡಿಸೆಂಬರ್ 2024, 23:30 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಬೆಂಗಳೂರು: ಬಿಎಂಎಸ್‌ ಎಂಜಿನಿಯರಿಂಗ್‌ ಕಾಲೇಜು ಮತ್ತು ಬಿಎಂಎಸ್ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿಯಲ್ಲಿ ‘ಸೀಟ್‌ ಬ್ಲಾಕಿಂಗ್‌’ ದಂಧೆ ನಡೆಯುತ್ತಿದೆ ಎಂದು 2020–21ರಲ್ಲೇ ಪ್ರವೇಶ ಮೇಲ್ವಿಚಾರಣಾ ಸಮಿತಿ ಸರ್ಕಾರಕ್ಕೆ ಪತ್ರ ಬರೆದಿತ್ತು.  

ಕರ್ನಾಟಕ ವೈದ್ಯಕೀಯ, ಎಂಜಿನಿಯರಿಂಗ್‌ ಮತ್ತು ದಂತ ಕಾಲೇಜುಗಳ ಒಕ್ಕೂಟ ಬಿಎಂಎಸ್‌ ​​ಶಿಕ್ಷಣ ಟ್ರಸ್ಟ್‌ ವಿರುದ್ಧ ಸಲ್ಲಿಸಿದ್ದ ದೂರುಗಳ ವಿಚಾರಣೆ ನಡೆಸಿದ್ದ ಪ್ರವೇಶ ಮೇಲ್ವಿಚಾರಣಾ ಸಮಿತಿಯ ಆಗಿನ ಅಧ್ಯಕ್ಷ, ನ್ಯಾಯಮೂರ್ತಿ ಬಿ. ಮನೋಹರ್‌ ಅವರು, ಸರ್ಕಾರಕ್ಕೆ ಪತ್ರ ಬರೆದು ಕ್ರಮಕೈಗೊಳ್ಳುವಂತೆ ಶಿಫಾರಸು ಮಾಡಿದ್ದರು.  

ADVERTISEMENT

ಅಂದು ಸಮಿತಿಯ ಮುಂದೆ ಹಾಜರಾಗಿದ್ದ ಟ್ರಸ್ಟ್‌ನ ಪ್ರಮುಖರು, ’ಮುಂದಿನ ಶೈಕ್ಷಣಿಕ ವರ್ಷದಿಂದ ಆಯ್ಕೆ ಪ್ರಕ್ರಿಯೆಯಲ್ಲಿ ಯಾವುದೇ ಅವ್ಯವಹಾರ, ಲೋಪಕ್ಕೆ ಅವಕಾಶ ನೀಡುವುದಿಲ್ಲ’ ಎಂದು ಹೇಳಿಕೆ ನೀಡಿದ್ದರು. ಈಗ ಮತ್ತೆ ‘ಸೀಟ್‌ ಬ್ಲಾಕಿಂಗ್‌’ ಸುಳಿಯಲ್ಲಿ ಸಂಸ್ಥೆ ಸಿಲುಕಿದೆ.

ಸಿಇಟಿಯ ಪ್ರಸಕ್ತ ಸಾಲಿನ ಎಂಜಿನಿಯರಿಂಗ್‌ ಸೀಟು ಹಂಚಿಕೆಯಲ್ಲಿ ‘ಸೀಟ್‌ ಬ್ಲಾಕಿಂಗ್‌’ ದಂಧೆ ನಡೆದಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಲ್ಲಿಸಿದ್ದ ದೂರಿನಲ್ಲಿ ಬಿಎಂಎಸ್‌ ಶಿಕ್ಷಣ ಸಂಸ್ಥೆಯ ಹೆಸರನ್ನೂ ಉಲ್ಲೇಖಿಸಿತ್ತು. ತನಿಖೆ ನಡೆಸುತ್ತಿರುವ ಪೊಲೀಸರು ಕೆಲ ಆರೋಪಿಗಳನ್ನು ಬಂಧಿಸಿದ್ದು, ಬಿಎಂಎಸ್‌ ಕಾಲೇಜುಗಳಿಗೂ ನೋಟಿಸ್‌ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.