ADVERTISEMENT

ಪಿಯು ಪೂರಕ ಪರೀಕ್ಷೆ ಮೊದಲ ದಿನ ಸರಾಗ

​ಪ್ರಜಾವಾಣಿ ವಾರ್ತೆ
Published 29 ಜೂನ್ 2018, 18:42 IST
Last Updated 29 ಜೂನ್ 2018, 18:42 IST

ಬೆಂಗಳೂರು:ದ್ವಿತೀಯ ಪಿಯು ಪೂರಕ ಪರೀಕ್ಷೆ ಶುಕ್ರವಾರ ಆರಂಭಗೊಂಡಿದ್ದು, ಮೊದಲ ದಿನ ಯಾವುದೇ ಅಡೆತಡೆಗಳಿಲ್ಲದೆ ಪರೀಕ್ಷೆ ನಡೆದಿದೆ.

ಸಮಾಜಶಾಸ್ತ್ರ, ಲೆಕ್ಕಶಾಸ್ತ್ರ, ಗಣಿತ ಪರೀಕ್ಷೆಗಳು ನಡೆದವು.ರಾಜ್ಯದಾದ್ಯಂತ 301 ಕೇಂದ್ರಗಳಲ್ಲಿ, ಖಾಸಗಿ ಹಾಗೂ ಪುನರಾವರ್ತಿತ ಅಭ್ಯರ್ಥಿಗಳು ಸೇರಿ ಸುಮಾರು2.5 ಲಕ್ಷ ಮಂದಿ ಪರೀಕ್ಷೆ ಬರೆದಿದ್ದಾರೆ.

ರಾಜ್ಯದ ಯಾವ ಕೇಂದ್ರದಲ್ಲಿಯೂ ವಿದ್ಯಾರ್ಥಿಗಳು ಡಿಬಾರ್‌ ಆಗಿಲ್ಲ. ಅಕ್ರಮ ಎಸಗಿದ ಪ್ರಕರಣಗಳೂ ನಡೆದಿಲ್ಲ ಎಂದು ಪದವಿಪೂರ್ಣ ಶಿಕ್ಷಣ ಇಲಾಖೆ ನಿರ್ದೇಶಕಿ ಸಿ.ಶಿಖಾ ತಿಳಿಸಿದರು.

ADVERTISEMENT

ಪ್ರಯತ್ನ ಯಶಸ್ವಿ: ‘ಆನ್‌ಲೈನ್‌ ಮೂಲಕ ಪ್ರಶ್ನೆಪತ್ರಿಕೆ ರವಾನಿಸುವ ಪ್ರಕ್ರಿಯೆ ಸುಗಮವಾಗಿ ನಡೆದಿದ್ದು, ಯಾವುದೇ ರೀತಿಯ ತಾಂತ್ರಿಕ ದೋಷಗಳು ಉಂಟಾಗಿಲ್ಲ. ಪರೀಕ್ಷೆಗಳು ಪೂರ್ಣಗೊಂಡ ನಂತರ ಆನ್‌ಲೈನ್‌ ಪ್ರಕ್ರಿಯೆಯ ಸಾಧಕ–ಭಾದಕಗಳ ಕುರಿತು ಮಾಹಿತಿ ನೀಡಲಾಗುವುದು’ ಎಂದು ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.