ಶಿರಸಿ: ದ್ವಿತೀಯ ಪಿಯುಸಿ ಪರೀಕ್ಷೆ ರದ್ದಾಗಿದ್ದಕ್ಕೆ ಬೇಸರಗೊಂಡ ತಾಲ್ಲೂಕಿನ ಸಹಸ್ರಳ್ಳಿಯ ಜಿ.ಧನ್ಯಾ (18) ಶುಕ್ರವಾರ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಈಕೆ ನಗರದ ಮಾರಿಕಾಂಬಾ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದರು. ‘ಈ ಬಾರಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆಯುವ ಹುಮ್ಮಸ್ಸಿನಲ್ಲಿದ್ದಳು. ಇದಕ್ಕಾಗಿ ಆರಂಭದಿಂದಲೂ ಶ್ರಮಪಟ್ಟು ಓದುತ್ತಿದ್ದಳು. ಈಚೆಗೆ ಪರೀಕ್ಷೆ ರದ್ದಾದ ವಿಷಯ ತಿಳಿದ ಬಳಿಕ ಖಿನ್ನಗೊಂಡಿದ್ದಳು’ ಎಂದು ಮೃತಳ ತಂದೆ ಪೊಲೀಸರಿಗೆ ಸಲ್ಲಿಸಿದ ದೂರಿನಲ್ಲಿ ತಿಳಿಸಿದ್ದಾರೆ.
ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.