ADVERTISEMENT

ದ್ವಿತೀಯ ಪಿಯುಸಿ ಪಠ್ಯ ಕಡಿತ

​ಪ್ರಜಾವಾಣಿ ವಾರ್ತೆ
Published 25 ಫೆಬ್ರುವರಿ 2021, 19:27 IST
Last Updated 25 ಫೆಬ್ರುವರಿ 2021, 19:27 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಬೆಂಗಳೂರು: ಕೋವಿಡ್ ಕಾರಣದಿಂದ 2020-21ನೇ ಸಾಲಿನ ಶೈಕ್ಷಣಿಕ ಚಟುವಟಿಕೆ ನಿಗದಿತ ಸಮಯದಲ್ಲಿ ಆರಂಭವಾಗಿಲ್ಲ. ಹೀಗಾಗಿ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿಗೆ ದಾಖಲಾದ ವಿದ್ಯಾರ್ಥಿಗಳಿಗೆ ಪಠ್ಯದಲ್ಲಿ ಶೇ 30ರಷ್ಟು ಕಡಿತ ಮಾಡಿ ರಾಜ್ಯ ಪದವಿ ಪೂರ್ವ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.

2021ರ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗುವ ಪುನರಾವರ್ತಿತ ಹಾಗೂ ಖಾಸಗಿಯಾಗಿ ನೋಂದಾಯಿಸಿಕೊಂಡಿರುವ ವಿದ್ಯಾರ್ಥಿಗಳಿಗೂ ಇದು ಅನ್ವಯಿಸುತ್ತದೆ ಎಂದು ಇಲಾಖೆಯ ನಿರ್ದೇಶಕರು
ತಿಳಿಸಿದ್ದಾರೆ.

'ಈ ಪಠ್ಯ ಕಡಿತ 2020-21ನೇ ಶೈಕ್ಷಣಿಕ ವರ್ಷಕ್ಕೆ ಮಾತ್ರ ಅನ್ವಯಿಸುತ್ತದೆ. 2021-22ರ ಶೈಕ್ಷಣಿಕ ವರ್ಷದಿಂದ ಪಠ್ಯದಲ್ಲಿ ಯಾವುದೇ ಕಡಿತ ಇರುವುದಿಲ್ಲ’ ಎಂದೂ ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.