ಬೆಂಗಳೂರು: ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಇಲಾಖೆಯ ಕಾರ್ಯದರ್ಶಿಯಾಗಿ ಜಿ. ಶ್ರೀಧರ್ ಅವರನ್ನು ನೇಮಿಸಲಾಗಿದೆ. ಕಳೆದ ಮೂರು ವರ್ಷಗಳಿಂದ ಗುತ್ತಿಗೆ ಆಧಾರದಲ್ಲಿ ಕಾರ್ಯದರ್ಶಿ ಹುದ್ದೆಯಲ್ಲಿದ್ದ ದ್ವಾರಕಾನಾಥ್ ಬಾಬು ಅವರ ಅವಧಿ ಜುಲೈ 31ರಂದು ಅಂತ್ಯವಾಗಿತ್ತು.
2018ರಿಂದ ಕಾರ್ಯದರ್ಶಿ ಹುದ್ದೆ ಖಾಲಿಯಿದ್ದು, ಈ ಹುದ್ದೆಯಿಂದ ನಿವೃತ್ತರಾಗಿದ್ದ ದ್ವಾರಕಾನಾಥ್ ಬಾಬುರನ್ನೇ ಮೊದಲಿಗೆ 2 ವರ್ಷ, ಬಳಿಕ 1 ವರ್ಷ ಅವಧಿಗೆ ಗುತ್ತಿಗೆ ಆಧಾರದ ಮೇಲೆ ಮುಂದುವರಿಸಲಾಗಿತ್ತು. ಈ ಹುದ್ದೆಗೆ ಅರ್ಹರು ಇದ್ದರೂ ಅವರನ್ನು ಮುಂದುವರಿಸಿದ ಬಗ್ಗೆ ಹಿರಿಯ ಅಧಿಕಾರಿಗಳ ವಲಯದಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು.
ಇದೀಗ, ಇಲಾಖೆಯಲ್ಲಿ ವಿಶೇಷ ಕಾರ್ಯದರ್ಶಿಯಾಗಿರುವ ಶ್ರೀಧರ್ ಅವರನ್ನು ಖಾಲಿ ಹುದ್ದೆಗೆ ನೇಮಿಸಿ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.