ADVERTISEMENT

ಕೋವಿಡ್-19 ಭೀತಿ: ಉಡುಪಿ ಜಿಲ್ಲೆಯಾದ್ಯಂತ ಸೆಕ್ಷನ್ 144 (3) ಜಾರಿ

​ಪ್ರಜಾವಾಣಿ ವಾರ್ತೆ
Published 18 ಮಾರ್ಚ್ 2020, 10:39 IST
Last Updated 18 ಮಾರ್ಚ್ 2020, 10:39 IST
   

ಉಡುಪಿ:ಕೊರೊನಾ ವೈರಸ್ಸೋಂಕು ಹರಡದಂತೆ ತಡೆಯಲು ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಾದ್ಯಂತ ಮಾರ್ಚ್ 19ರಿಂದ ಅನಿರ್ದಿಷ್ಟಾವಧಿವರೆಗೆ ಸೆಕ್ಷನ್ 144 (3) ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ

ಹಿಂದೆ, ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸುವಂತೆ ಸಾರ್ವಜನಿಕರಿಗೆ ಸೂಚನೆ ನೀಡಿದ್ದರೂ ಸರಿಯಾಗಿ ಪಾಲನೆ ಮಾಡುತ್ತಿಲ್ಲ. ಹಾಗಾಗಿ, ಕೆಲವು ನಿರ್ಬಂಧಗಳನ್ನು ಜಾರಿಗೊಳಿಸಲಾಗುತ್ತಿದೆ ಎಂದು ಡಿಸಿ ಆದೇಶದಲ್ಲಿ ತಿಳಿಸಿದ್ದಾರೆ.

ಈ ಅವಧಿಯಲ್ಲಿ ಜಾತ್ರೆ, ಧಾರ್ಮಿಕ ಉತ್ಸವಗಳಲ್ಲಿ ಭಕ್ತರು ಭಾಗವಹಿಸುವಂತಿಲ್ಲ. ಸಂತೆ, ಸಾಮೂಹಿಕ ವಿವಾಹ ಮಹೋತ್ಸವ ಹಾಗೂ ಹೆಚ್ಚು ಜನರು ಸೇರುವ ಯಾವುದೇ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತಿಲ್ಲ. ಬೀಚ್ ಪ್ರವಾಸಿ ತಾಣಗಳಿಗೆ ಪ್ರವಾಸಿಗರು ಭೇಟಿ ನೀಡುವಂತಿಲ್ಲ. ದೇವಸ್ಥಾನಗಳಲ್ಲಿ ದೇವರ ದರ್ಶನ ಹೊರತುಪಡಿಸಿ ಯಾವುದೇ ಉತ್ಸವಗಳನ್ನು ನಡೆಸುವಂತಿಲ್ಲ ಎಂದು ಸೂಚನೆ ನೀಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.