ADVERTISEMENT

ಪಿಎಫ್‌ಐ ನಿಷೇಧ: ರಾಜ್ಯದಲ್ಲಿ ವ್ಯಾಪಕ ಕಟ್ಟೆಚ್ಚರ

​ಪ್ರಜಾವಾಣಿ ವಾರ್ತೆ
Published 28 ಸೆಪ್ಟೆಂಬರ್ 2022, 6:54 IST
Last Updated 28 ಸೆಪ್ಟೆಂಬರ್ 2022, 6:54 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಪಿಎಫ್‌ಐ ಸೇರಿದಂತೆ ಅದರ ಬೆಂಬಲಿತ ಸಂಘಟನೆಗಳನ್ನು ಕೇಂದ್ರ ಸರ್ಕಾರವು ಐದು ವರ್ಷಗಳ ನಿಷೇಧಿಸಿದ್ದು ರಾಜ್ಯದಲ್ಲಿ ‌ಕಟ್ಟೆಚ್ಚರ ವಹಿಸಲಾಗಿದೆ.

ಸೂಕ್ಷ್ಮ ಪ್ರದೇಶಗಳಲ್ಲಿ ಬಂದೋಬಸ್ತ್ ಹೆಚ್ಚಿಸಲು ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಸೂಚನೆ ನೀಡಿದ್ದಾರೆ.

ಯಾವುದೇ ಪ್ರತಿಭಟನೆ, ಅಹಿತಕರ ಘಟನೆಗೆ ಅವಕಾಶ ನೀಡದಂತೆ‌ ಪೊಲೀಸರು‌ ಎಲ್ಲೆಡೆ ಕಟ್ಟೆಚ್ಚರ ವಹಿಸಿದ್ದಾರೆ.

ADVERTISEMENT

ಬೆಂಗಳೂರಿನ ಚಾಮರಾಜಪೇಟೆ, ಡಿಜಿ ಹಳ್ಳಿ, ಕೆಜಿ ಹಳ್ಳಿಯ ಸೂಕ್ಷ್ಮ ಪ್ರದೇಶದಲ್ಲಿ ಹೆಚ್ಚಿನ ಪೊಲೀಸ್ ನಿಯೋಜನೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ದಕ್ಷಿಣ ಕನ್ನಡ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು ಸೇರಿದಂತೆ ಸೂಕ್ಷ್ಮ ಜಿಲ್ಲೆಗಳಲ್ಲಿ ಪೊಲೀಸರು ತೀವ್ರ ನಿಗಾ ವಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.