
ನವದೆಹಲಿ: ಭದ್ರತಾ ವೈಫಲ್ಯದ ಕಾರಣಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯಲ್ಲಿ ಭಾಷಣ ಮಾಡಿಲ್ಲ. ಇದರ ಹೊಣೆ ಹೊತ್ತು ಗೃಹ ಸಚಿವ ಅಮಿತ್ ಶಾ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಆಗ್ರಹಿಸಿದರು.
ಶುಕ್ರವಾರ ಇಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ‘ಲೋಕಸಭಾಧ್ಯಕ್ಷ ಓಂ ಬಿರ್ಲಾ ಅವರ ಹೇಳಿಕೆಗಳನ್ನು ಗಮನಿಸಿದರೆ ಶಾ ವೈಫಲ್ಯ ಎದ್ದು ಕಾಣುತ್ತದೆ. ಪ್ರಧಾನಿಗೆ ಬೆದರಿಕೆ ಇದೆ ಎಂದರೆ ಶಾ ಅವರು ಸಚಿವ ಸ್ಥಾನದಲ್ಲಿ ಒಂದು ಗಳಿಗೆ ಕೂಡ ಇರಲು ಅರ್ಹರಲ್ಲ‘ ಎಂದರು.
‘ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪುಕ್ಕಲುತನ. ಅದೇ ಕಾರಣಕ್ಕೆ ಲೋಕಸಭೆಯಲ್ಲಿ ಭಾಷಣ ಮಾಡಿಲ್ಲ. ಪತ್ರಕರ್ತರ ಪ್ರಶ್ನೆಗಳಿಗೆ ಹೆದರಿ ಅವರು 14 ವರ್ಷಗಳಿಂದ ಪತ್ರಿಕಾಗೋಷ್ಠಿ ನಡೆಸಿಲ್ಲ. ಈಗ ಅವರ ಮತ್ತೊಂದು ಪುಕ್ಕಲುತನ ಅನಾವರಣಗೊಂಡಿದೆ. ಬಿಜೆಪಿಯವರು ಹೇಡಿಗಳು‘ ಎಂದು ಟೀಕಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.