ಬೆಂಗಳೂರು: ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ಪೊಲೀಸ್ ಭದ್ರತೆ ಬಿಗಿಗೊಳಿಸಲಾಗಿದ್ದು, ಕ್ಷೇತ್ರದಲ್ಲಿ ಭದ್ರತಾ ಪಡೆಗಳು ಸೋಮವಾರ ಪಥಸಂಚಲನ ನಡೆಸಿದವು.
ಪಶ್ಚಿಮ ಹಾಗೂ ಉತ್ತರ ವಿಭಾಗ ವ್ಯಾಪ್ತಿಯಲ್ಲಿ ಕ್ಷೇತ್ರವಿದ್ದು, ನಗರದ ಪೊಲೀಸರ ನಿತ್ಯವೂ ಗಸ್ತು ತಿರುಗುತ್ತಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಕೇಂದ್ರೀಯ ಅರೆಸೇನಾ ಪಡೆ ತುಕಡಿಗಳನ್ನು ನಗರಕ್ಕೆ ಕರೆಸಲಾಗಿದೆ. ನೆರೆಯ ತಮಿಳುನಾಡು, ಆಂಧ್ರಪ್ರದೇಶ ಪೊಲೀಸರೂ ಭದ್ರತೆಗಾಗಿ ನಗರಕ್ಕೆ ಬಂದಿದ್ದಾರೆ.
ಎಲ್ಲ ಭದ್ರತಾ ಪಡೆಗಳು ಕ್ಷೇತ್ರದ ಬಹುತೇಕ ಪ್ರದೇಶಗಳಲ್ಲಿ ಪಥಸಂಚಲನ ಮಾಡಿದರು. ತುಕಡಿ ವಾಹನಗಳು ಹಾಗೂ ಶಸ್ತ್ರಸಜ್ಜಿತ ಸಿಬ್ಬಂದಿ ಪಥಸಂಚಲನದಲ್ಲಿ ಇದ್ದರು.
‘ಸೂಕ್ಷ್ಮ ಹಾಗೂ ಅತೀ ಸೂಕ್ಷ್ಮ ಸ್ಥಳಗಳನ್ನು ಗುರುತಿಸಲಾಗಿದೆ. ಅಲ್ಲೆಲ್ಲ ಭದ್ರತೆಗೆ ಒತ್ತು ನೀಡಲಾಗಿದ್ದು, ಪ್ರತಿಯೊಂದು ಸ್ಥಳಗಳ ಮೇಲೂ ಕಣ್ಣಿಡಲಾಗಿದೆ’ ಎಂದು ಪಶ್ಚಿವ ವಿಭಾಗದ ಡಿಸಿಪಿ ಸಂಜೀವ್ ಪಾಟೀಲ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.