ADVERTISEMENT

ದೇಶದ್ರೋಹ ಪ್ರಕರಣ: ಜಾಮೀನು ಅರ್ಜಿ ತೀರ್ಪು 9ಕ್ಕೆ

​ಪ್ರಜಾವಾಣಿ ವಾರ್ತೆ
Published 5 ಮಾರ್ಚ್ 2020, 18:54 IST
Last Updated 5 ಮಾರ್ಚ್ 2020, 18:54 IST
   

ಹುಬ್ಬಳ್ಳಿ: ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪದ ಮೇಲೆ ಬಂಧಿತರಾದ ಕಾಶ್ಮೀರದ ಮೂವರು ವಿದ್ಯಾರ್ಥಿಗಳ ಪರ ಸಲ್ಲಿಸಲಾಗಿದ್ದ ಜಾಮೀನು ಅರ್ಜಿಯನ್ನು ಗುರುವಾರ ವಿಚಾರಣೆ ನಡೆಸಿದ ಇಲ್ಲಿನ ಐದನೇ ಹೆಚ್ಚುವರಿ ಸೆಷನ್ಸ್‌ ಕೋರ್ಟ್‌, ಮಾರ್ಚ್‌ 9ಕ್ಕೆ ಆದೇಶ ಕಾಯ್ದಿರಿಸಿತು.

ದೇಶದ್ರೋಹ ಆರೋಪದ ಮೇಲೆ ಬಂಧಿತರಾಗಿ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ಇರುವ ಹುಬ್ಬಳ್ಳಿ ಕೆಎಲ್‌ಇ ಎಂಜಿನಿಯರಿಂಗ್‌ ಕಾಲೇಜಿನ ವಿದ್ಯಾರ್ಥಿಗಳಾದ ಅಮೀರ್‌ ವಾನಿ, ತಾಲಿಬ್‌ ಮಜೀದ್‌ ಮತ್ತು ಬಾಸಿತ್‌ ಸೋಫಿ ಅವರಿಗೆ ಜಾಮೀನು ನೀಡಬೇಕೆಂದು ಬೆಂಗಳೂರಿನ ವಕೀಲ ಬಿ.ಟಿ. ವೆಂಕಟೇಶ ನೇತೃತ್ವದ ವಕೀಲರ ತಂಡ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತು.

ನ್ಯಾಯಾಧೀಶ ಕೆ.ಎನ್‌. ಗಂಗಾಧರ ಅವರು ಜಾಮೀನು ಅರ್ಜಿ ವಿಚಾರಣೆ ನಡೆಸುತ್ತಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.