ADVERTISEMENT

ಕೇಂದ್ರ ಚುನಾವಣಾ ಸಮಿತಿಯಿಂದ ಬಿಜೆಪಿ ಅಭ್ಯರ್ಥಿಗಳ ಆಯ್ಕೆ: ಅರುಣ್ ಸಿಂಗ್

​ಪ್ರಜಾವಾಣಿ ವಾರ್ತೆ
Published 3 ಅಕ್ಟೋಬರ್ 2021, 8:15 IST
Last Updated 3 ಅಕ್ಟೋಬರ್ 2021, 8:15 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಬೆಂಗಳೂರು: ಸಿಂದಗಿ ಮತ್ತು ಹಾನಗಲ್ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದಂತೆ ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಅಂತಿಮ ನಿರ್ಧಾರ ಕೈಗೊಳ್ಳಲಿದೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ತಿಳಿಸಿದರು.

ನಗರದ ಕುಮಾರಕೃಪಾ ಅತಿಥಿ ಗೃಹದಲ್ಲಿ ಭಾನುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, 'ಮಧ್ಯಾಹ್ನ ಬಿಜೆಪಿ ರಾಜ್ಯ ಘಟಕದ ಪ್ರಮುಖರ ಸಮಿತಿ ಸಭೆ ನಡೆಯಲಿದೆ. ಸಂಭವನೀಯ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧಪಡಿಸಿ ಪಕ್ಷದ ಕೇಂದ್ರ ಚುನಾವಣಾ ಸಮಿತಿಗೆ ಕಳಿಸಲಾಗುವುದು. ಕೇಂದ್ರ ಸಮಿತಿ ಅಭ್ಯರ್ಥಿಗಳ ಆಯ್ಕೆಯನ್ನು ಪ್ರಕಟಿಸಲಿದೆ' ಎಂದರು.

ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಉತ್ತಮವಾಗಿ ಕೆಲಸ ಮಾಡುತ್ತಿದೆ. ಸಿಂದಗಿ ಮತ್ತು ಹಾನಗಲ್ ಕ್ಷೇತ್ರಗಳ ಜನರು ಬಿಜೆಪಿಯನ್ನು ಬೆಂಬಲಿಸಲಿದ್ದಾರೆ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.