ADVERTISEMENT

‘ರಾಜಕಾರಣಿಗಳಲ್ಲಿ ನಡುಕ ಹುಟ್ಟಿಸಿದ್ದ ರಾಮಚಂದ್ರ ಡಿ.ಹುದ್ದಾರ’: ವಿವೇಕ ರೆಡ್ಡಿ

​ಪ್ರಜಾವಾಣಿ ವಾರ್ತೆ
Published 12 ಆಗಸ್ಟ್ 2025, 15:58 IST
Last Updated 12 ಆಗಸ್ಟ್ 2025, 15:58 IST
<div class="paragraphs"><p>ನ್ಯಾಯಮೂರ್ತಿ ರಾಮಚಂದ್ರ ಡಿ.ಹುದ್ದಾರ ಅವರನ್ನು ಬೆಂಗಳೂರು ವಕೀಲರ ಸಂಘದ (ಎಎಬಿ) ವತಿಯಿಂದ ಹೈಕೋರ್ಟ್‌ನ ವಕೀಲರ ಸಭಾಂಗಣದಲ್ಲಿ ಸನ್ಮಾನಿಸಿ ಬೀಳ್ಕೊಡಲಾಯಿತು.&nbsp;</p></div>

ನ್ಯಾಯಮೂರ್ತಿ ರಾಮಚಂದ್ರ ಡಿ.ಹುದ್ದಾರ ಅವರನ್ನು ಬೆಂಗಳೂರು ವಕೀಲರ ಸಂಘದ (ಎಎಬಿ) ವತಿಯಿಂದ ಹೈಕೋರ್ಟ್‌ನ ವಕೀಲರ ಸಭಾಂಗಣದಲ್ಲಿ ಸನ್ಮಾನಿಸಿ ಬೀಳ್ಕೊಡಲಾಯಿತು. 

   

ಬೆಂಗಳೂರು: ‘ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ನ ನ್ಯಾಯಾಧೀಶರಾಗಿದ್ದ ಸಂದರ್ಭದಲ್ಲಿ ನ್ಯಾಯಮೂರ್ತಿ ರಾಮಚಂದ್ರ ಡಿ.ಹುದ್ದಾರ ಅವರ ಕಾರ್ಯವೈಖರಿ ವಿಚಾರಣೆಗೆ ಎದುರಾಗುವ ರಾಜಕಾರಣಿಗಳಿಗೆ ನಡುಕ ಹುಟ್ಟಿಸುತ್ತಿತ್ತು. ಇವರೊಬ್ಬ ಅಪ್ಪಟ ಸಾರ್ವಜನಿಕ ಪ್ರತಿನಿಧಿಯಾಗಿ ಸೇವೆ ಸಲ್ಲಿಸಿದ ನ್ಯಾಯಮೂರ್ತಿ’ ಎಂದು ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ವಿವೇಕ ರೆಡ್ಡಿ ಬಣ್ಣಿಸಿದರು.

ಹೈಕೋರ್ಟ್‌ ನ್ಯಾಯಮೂರ್ತಿ ರಾಮಚಂದ್ರ ಡಿ.ಹುದ್ದಾರ ಅವರು ಮಂಗಳವಾರ ನಿವೃತ್ತರಾದರು. ಬೆಂಗಳೂರು ವಕೀಲರ ಸಂಘದ (ಎಎಬಿ) ವತಿಯಿಂದ ಹೈಕೋರ್ಟ್‌ನ ವಕೀಲರ ಸಭಾಂಗಣದಲ್ಲಿ ಸನ್ಮಾನಿಸಿ ಅವರನ್ನು ಬೀಳ್ಕೊಡಲಾಯಿತು. 

ADVERTISEMENT

ಈ ಸಂದರ್ಭದಲ್ಲಿ ಮಾತನಾಡಿದ ವಿವೇಕ ರೆಡ್ಡಿ, ‘ಕಾನೂನು ಎಂಬುದು ತರ್ಕವಲ್ಲ. ಅದೊಂದು ಅನುಭವ ಎಂಬುದನ್ನು ತಮ್ಮ ಮೂರು ದಶಕಗಳಿಗೂ ಹೆಚ್ಚಿನ ಸೇವಾವಧಿಯಲ್ಲಿ ಜಿಲ್ಲಾ ನ್ಯಾಯಾಧೀಶರಾಗಿ ಮತ್ತು ಹೈಕೋರ್ಟ್‌ ನ್ಯಾಯಮೂರ್ತಿಯಾಗಿ ರಾಮಚಂದ್ರ ಹುದ್ದಾರ ಅವರು ತೋರಿಸಿಕೊಟ್ಟಿದ್ದಾರೆ. ಇದು ಕಿರಿಯರಿಗೆ ಮಾರ್ಗದರ್ಶಕ’ ಎಂದರು.

ಅಡ್ವೊಕೇಟ್‌ ಜನರಲ್‌ ಕೆ.ಶಶಿಕಿರಣ ಶೆಟ್ಟಿ ಮಾತನಾಡಿ, ‘ರಾಮಚಂದ್ರ ಹುದ್ದಾರ ಅವರು ಹೈಕೋರ್ಟ್‌ ರಿಜಿಸ್ಟ್ರಾರ್ ಜನರಲ್‌ ಆಗಿ, ಅಕಾಡೆಮಿ ಅಧ್ಯಕ್ಷರಾಗಿ, ಜಿಲ್ಲಾ ನ್ಯಾಯಾಧೀಶರಾಗಿ ಸಲ್ಲಿಸಿರುವ ತಾಳ್ಮೆಯ ಮತ್ತು ಯಶಸ್ಸುಭರಿತ ಸೇವೆ ಸದಾ ಮಾದರಿಯಾಗಿದೆ’ ಎಂದರು. ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು, ‘ನಿವೃತ್ತಿ ಜೀವನ ಸುಖಕರವಾಗಿರಲಿ’ ಎಂದು ಹಾರೈಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.