ADVERTISEMENT

ಆಸ್ಕರ್‌ಗೆ ಗಾಯ; ಆಸ್ಪತ್ರೆಗೆ ದಾಖಲು

​ಪ್ರಜಾವಾಣಿ ವಾರ್ತೆ
Published 20 ಜುಲೈ 2021, 18:19 IST
Last Updated 20 ಜುಲೈ 2021, 18:19 IST
ಆಸ್ಕರ್‌ ಫರ್ನಾಂಡಿಸ್‌
ಆಸ್ಕರ್‌ ಫರ್ನಾಂಡಿಸ್‌   

ಮಂಗಳೂರು: ಹಿರಿಯ ಕಾಂಗ್ರೆಸ್‌ ಮುಖಂಡ ಆಸ್ಕರ್ ಫರ್ನಾಂಡಿಸ್ ಅವರು ಯೋಗ ಮಾಡುವ ವೇಳೆ ಜಾರಿ ಬಿದ್ದು ಗಾಯಗೊಂಡಿದ್ದು, ನಗರದ ಯೇನೆಪೋಯ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಭಾನುವಾರ ಬೆಳಿಗ್ಗೆ ಯೋಗ ಮಾಡುವ ವೇಳೆ ಅವರು ನಿಯಂತ್ರಣ ತಪ್ಪಿ ಜಾರಿ ಬಿದ್ದಿದ್ದಾರೆ. ದೊಡ್ಡ ಪೆಟ್ಟಾಗಿಲ್ಲ ಎಂದು ನಿರ್ಲಕ್ಷಿಸಿದ್ದರು. ಭಾನುವಾರ ಸಂಜೆ ಆರೋಗ್ಯ ತಪಾಸಣೆಗಾಗಿ ಅವರು ಆಸ್ಪತ್ರೆಗೆ ತೆರಳಿದ್ದರು.

ವೈದ್ಯರು ತಪಾಸಣೆ ಮಾಡಿದಾಗ, ತಲೆಯ ಒಳಭಾಗಕ್ಕೆ ಪೆಟ್ಟಾಗಿರುವುದು ಗೊತ್ತಾಯಿತು.

ADVERTISEMENT

‘ಆಸ್ಕರ್ ಫರ್ನಾಂಡಿಸ್ ಅವರಿಗೆ ಕೂಡಲೇ ಶಸ್ತ್ರಚಿಕಿತ್ಸೆ ಮಾಡುವ ಅಗತ್ಯವಿದೆ ಎಂದು ವೈದ್ಯರು ಹೇಳಿದ್ದಾರೆ. ಸದ್ಯ ಅವರಿಗೆ ತೀವ್ರ ನಿಗಾ ಘಟಕದಲ್ಲಿ ವೆಂಟಿಲೇಟರ್‌ ಅಳವಡಿಸಿ ಚಿಕಿತ್ಸೆ ನೀಡಲಾಗುತ್ತಿದೆ’ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.