ADVERTISEMENT

ಮೀಸಲಾತಿ ಹೆಚ್ಚಳ: ಪ್ರತ್ಯೇಕ ಚರ್ಚೆಗೆ ಅವಕಾಶ

​ಪ್ರಜಾವಾಣಿ ವಾರ್ತೆ
Published 20 ಡಿಸೆಂಬರ್ 2022, 21:45 IST
Last Updated 20 ಡಿಸೆಂಬರ್ 2022, 21:45 IST
   

ಬೆಳಗಾವಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳಕ್ಕೆ ಇರುವ ಕಾನೂನಾತ್ಮಕ ಅವಕಾಶ ಹಾಗೂ ಅಡ್ಡಿಗಳ ಬಗ್ಗೆ ಚರ್ಚಿಸಲು ಸಮಯ ನಿಗದಿ ಮಾಡು ವುದಾಗಿ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಭರವಸೆ ನೀಡಿದರು.

ಈ ವಿಷಯದ ಬಗ್ಗೆ ಚರ್ಚೆಸಲು ಅವಕಾಶ ಕೋರಿ ನಿಲುವಳಿ ಸೂಚನೆ ಮಂಡಿಸಲು ಮುಂದಾದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ‘ಮೀಸಲಾತಿ ಹೆಚ್ಚಳದ ಪರವಾಗಿ ನಾವಿದ್ದೇವೆ. ಆದರೆ, ನೀವು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಿ ಆದೇಶ ಹೊರಡಿಸಿದ್ದೀರಿ. ಸಂವಿಧಾನದ 9ನೇ ವಿಧಿಗೆ ತಿದ್ದುಪಡಿ ತರದೇ ಮೀಸಲಾತಿ ಹೆಚ್ಚಳ ಮಾಡುವುದು ಸಾಧ್ಯವಿಲ್ಲ ಎಂದು ಮೊದಲಿನಿಂದಲೂ ನಾವು ಪ್ರತಿಪಾದಿಸುತ್ತಾ ಬಂದಿದ್ದೇವೆ. ಇದು ಸಂವಿಧಾನಕ್ಕೆ ಸಂಬಂಧಿಸಿದ ವಿಷಯವಾಗಿದ್ದರಿಂದಾಗಿ ಚರ್ಚೆಗೆ ಅವಕಾಶ ಕೊಡಬೇಕು‘ ಎಂದರು. ಸಚಿವ ಜೆ.ಸಿ. ಮಾಧುಸ್ವಾಮಿ ಇದಕ್ಕೆ ಒಪ್ಪಲಿಲ್ಲ. ಕೊನೆಗೆ ಸಿ. ಎಂ ಚರ್ಚೆಗೆ ಒಪ್ಪಿಗೆ ಸೂಚಿಸಿದರು.ಸ್ಪೀಕರ್‌ ಅದಕ್ಕೆ ಸಮ್ಮತಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT