ADVERTISEMENT

ಕೊಡಚಾದ್ರಿ ಬೆಟ್ಟ ಪ್ರವೇಶ ಶುಲ್ಕದ ಹಣ ಹುಲಿ ಸಂರಕ್ಷಿತ ಪ್ರತಿಷ್ಠಾನ ನಿಧಿಗೆ

​ಪ್ರಜಾವಾಣಿ ವಾರ್ತೆ
Published 13 ಸೆಪ್ಟೆಂಬರ್ 2021, 16:11 IST
Last Updated 13 ಸೆಪ್ಟೆಂಬರ್ 2021, 16:11 IST

ಬೆಂಗಳೂರು: ಕೊಡಚಾದ್ರಿ ಪ್ರವೇಶ ಶುಲ್ಕ ಮೂರು ಪಟ್ಟು, ಚಾರಣ ಶುಲ್ಕ ಶೇ 50ರಷ್ಟು ಹೆಚ್ಚಳ ಮಾಡಿರುವುದಕ್ಕೆ ಸ್ಪಷ್ಟನೆ ನೀಡಿರುವ ಅರಣ್ಯ ಇಲಾಖೆ, ಈ ಹಣವನ್ನು ಭದ್ರಾ ಹುಲಿ ಸಂರಕ್ಷಿತ ಪ್ರತಿಷ್ಠಾನ ನಿಧಿ ಮತ್ತು ಕಟ್ಟಿನಹೊಳೆ ಪರಿಸರ ಅಭಿವೃದ್ಧಿ ಸಮಿತಿಗೆ ಜಮೆ ಮಾಡುವುದಾಗಿ ಹೇಳಿದೆ.

ಕೊಡಚಾದ್ರಿ ಚಾರಣ ಶುಲ್ಕ ಪರಿಷ್ಕರಣೆ ಕುರಿತು ವಿಧಾನ ಪರಿಷತ್‌ ಕಾಂಗ್ರೆಸ್‌ ಸದಸ್ಯ ಕೆ. ಪ್ರತಾಪಚಂದ್ರ ಶೆಟ್ಟಿ ಕೇಳಿದ ಪ್ರಶ್ನೆಗೆ ಉತ್ತರಿಸಿರುವ ಅರಣ್ಯ ಸಚಿವ ಉಮೇಶ ಕತ್ತಿ, ‘2021ರ ಏ.1ರಿಂದ ಶುಲ್ಕವನ್ನು ಪರಿಷ್ಕರಿಸಲಾಗಿದೆ. ಪ್ರವೇಶ ಶುಲ್ಕವನ್ನು ₹25ರಿಂದ ₹100ಕ್ಕೆ, ಚಾರಣ ಶುಲ್ಕವನ್ನು ₹200ರಿಂದ ₹300ಕ್ಕೆ ಏರಿಸಲಾಗಿದೆ’ ಎಂದರು.

‘ಕೊಡಚಾದ್ರಿಯಲ್ಲಿ 2021–22ರ ಆಗಸ್ಟ್‌ವರೆಗೆ ₹22.46 ಲಕ್ಷವನ್ನು ವಿವಿಧ ಶುಲ್ಕಗಳ ರೂಪದಲ್ಲಿ ಸಂಗ್ರಹಿಸಲಾಗಿದೆ. ಈ ಪೈಕಿ ಕಟ್ಟಿನಹೊಳೆ ಪರಿಸರ ಅಭಿವೃದ್ಧಿ ಸಮಿತಿಗೆ ₹2.82 ಲಕ್ಷ ಹಾಗೂ ಭದ್ರಾ ಹುಲಿ ಪ್ರತಿಷ್ಠಾನ ನಿಧಿಗೆ ₹19.64 ಲಕ್ಷ ಜಮಾ ಮಾಡಲಾಗಿದೆ’ ಎಂದೂ ಅವರು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.