ಬೆಂಗಳೂರು: ಕೋವಿಡ್ ಅಧಿಕ ಪ್ರಕರಣಗಳು ವರದಿಯಾದ ಚೀನಾ, ಹಾಂಗ್‌ಕಾಂಗ್, ಜಪಾನ್, ದಕ್ಷಿಣ ಕೊರಿಯಾ, ಸಿಂಗಪುರ ಹಾಗೂ
ಥಾಯ್ಲೆಂಡ್‌ನಿಂದ ಬರುವ ಪ್ರಯಾಣಿಕರು ಕಡ್ಡಾಯವಾಗಿ ಏಳು ದಿನ ಮನೆಯಲ್ಲಿ ಪ್ರತ್ಯೇಕ ವಾಸಕ್ಕೆ (ಕ್ವಾರಂಟೈನ್) ಒಳಗಾಗಬೇಕು ಎಂದು ಆರೋಗ್ಯ ಇಲಾಖೆ ಸೂಚಿಸಿದೆ.
ಈ ಬಗ್ಗೆ ಸುತ್ತೋಲೆ ಹೊರಡಿಸಲಾಗಿದ್ದು, ಕರ್ನಾಟಕದಲ್ಲಿ ಸದ್ಯ ಪ್ರತಿನಿತ್ಯ 30ರಿಂದ 40 ಕೋವಿಡ್ ಪ್ರಕರಣಗಳು ವರದಿಯಾಗುತ್ತಿವೆ. ಸೋಂಕು ದೃಢ ಪ್ರಮಾಣ ಕಳೆದ ಐದು ತಿಂಗಳಿಂದ ಶೇ 0.5ರಿಂದ ಶೇ 0.7ರಷ್ಟಿದೆ.
ರೂಪಾಂತರಿ ವೈರಾಣುವಿನ ಪತ್ತೆಯಿಂದಾಗಿ ವಿದೇಶಗಳಲ್ಲಿ ಅಧಿಕ ಪ್ರಕರಣಗಳು ವರದಿಯಾಗುತ್ತಿವೆ. ಆದ್ದರಿಂದ ಸೋಂಕಿತರ ಸಂಪರ್ಕ ಪತ್ತೆಗೆ ಆದ್ಯತೆ ನೀಡಬೇಕು ಎಂದು ತಿಳಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.