ADVERTISEMENT

ರಾಜ್ಯದಲ್ಲಿ 7 ತಿಂಗಳಲ್ಲಿ 7 ಲಕ್ಷ ಜನಕ್ಕೆ ಕೋವಿಡ್‌

​ಪ್ರಜಾವಾಣಿ ವಾರ್ತೆ
Published 10 ಅಕ್ಟೋಬರ್ 2020, 19:31 IST
Last Updated 10 ಅಕ್ಟೋಬರ್ 2020, 19:31 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ರಾಜ್ಯದಲ್ಲಿ ಮತ್ತೆ 10,517 ಮಂದಿ ಕೋವಿಡ್ ಪೀಡಿತರಾಗಿರುವುದು ಶನಿವಾರ ದೃಢಪಟ್ಟಿದೆ. ಇದರೊಂದಿಗೆ ಮೊದಲ ಪ್ರಕರಣ ವರದಿಯಾದ ಏಳು ತಿಂಗಳಲ್ಲಿ ಸೋಂಕಿತರ ಸಂಖ್ಯೆ 7 ಲಕ್ಷದ ಗಡಿ ದಾಟಿದೆ.

ಈ ವಾರ ಆರು ದಿನಗಳಲ್ಲಿಯೇ 60,125 ಮಂದಿಗೆ ಕೋವಿಡ್‌ ದೃಢಪಟ್ಟಿದೆ. ಈ ಅವಧಿಯಲ್ಲಿ ಪ್ರತಿನಿತ್ಯ ಸರಾಸರಿ 10 ಸಾವಿರಕ್ಕೂ ಅಧಿಕ ಪ್ರಕರಣಗಳು ವರದಿಯಾಗಿವೆ.

ಶನಿವಾರ ಒಂದೇ ದಿನ 1.12 ಲಕ್ಷ ಮಂದಿಗೆ ಕೋವಿಡ್ ಪರೀಕ್ಷೆ ಮಾಡಲಾಗಿದೆ. ಈವರೆಗೆ 58.52 ಲಕ್ಷ ಮಂದಿ ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದಾರೆ. ಕೊರೊನಾ ಸೋಂಕಿತರ ಪೈಕಿ ಬೆಂಗಳೂರಿನಲ್ಲಿ 30 ಮಂದಿ ಸೇರಿದಂತೆ ರಾಜ್ಯದಲ್ಲಿ 102 ಮಂದಿ ಮೃತಪಟ್ಟಿದ್ದಾರೆ. ಈವರೆಗೆ ಸಾವಿಗೀಡಾದವರ ಒಟ್ಟು ಸಂಖ್ಯೆ 9,891ಕ್ಕೆ ತಲುಪಿದೆ.

ADVERTISEMENT

ಬೆಂಗಳೂರಿನಲ್ಲಿ 4,563, ಬೆಳಗಾವಿಯಲ್ಲಿ 515, ಮೈಸೂರಿನಲ್ಲಿ 465 ಪ್ರಕರಣಗಳು ವರದಿಯಾಗಿದ್ದು, ಅಲ್ಲಿ ಸೋಂಕಿತರ ಸಂಖ್ಯೆ 41 ಸಾವಿರ ದಾಟಿದೆ. ಹಾಸನ (455), ಚಿತ್ರದುರ್ಗ (447), ತುಮಕೂರು (374), ದಾವಣಗೆರೆ (345) ಜಿಲ್ಲೆಯಲ್ಲಿಯೂ ಅಧಿಕ ಪ್ರಕರಣಗಳು ಹೊಸದಾಗಿ ವರದಿಯಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.