ADVERTISEMENT

ಭಾರಿ ಮಳೆ, ಪ್ರತಿಕೂಲ ಹವಾಮಾನ ಪರಿಸ್ಥಿತಿ: ವಿಮಾನ ಸಂಚಾರ ವ್ಯತ್ಯಯ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 6 ಸೆಪ್ಟೆಂಬರ್ 2022, 5:07 IST
Last Updated 6 ಸೆಪ್ಟೆಂಬರ್ 2022, 5:07 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸೋಮವಾರ ರಾತ್ರಿಯೂ ಧಾರಾಕಾರ ಮಳೆಯಾಗಿದೆ.

ಪ್ರತಿಕೂಲ ಹವಾಮಾನ ಪರಿಸ್ಥಿತಿಯಿಂದಾಗಿ ವಿಮಾನ ಸಂಚಾರದಲ್ಲಿ ವ್ಯತ್ಯಯವಾಗಿದೆ. ಅನೇಕ ವಿಮಾನಗಳ ಹಾರಾಟ ವಿಳಂಬವಾಗಿದೆ.

ಮಾರತಹಳ್ಳಿ–ಸಿಲ್ಕ್ ಬೋರ್ಡ್ ಪ್ರದೇಶದ ಹೊರ ವರ್ತುಲ ರಸ್ತೆ ಜಲಾವೃತವಾಗಿದೆ.

ಎಚ್‌ಎಎಲ್‌ ವಿಮಾನ ನಿಲ್ದಾಣ ಸಮೀಪದ ಯಮಲೂರಿನ ಬಳಿ ರಸ್ತೆ ಜಲಾವೃತಗೊಂಡಿದ್ದು, ಐಟಿ ಉದ್ಯೋಗಿಗಳು ಜಲಾವೃತ ಕಚೇರಿ ತಲುಪುವುದಕ್ಕಾಗಿ ಟ್ರ್ಯಾಕ್ಟರ್‌ಗಳ ಮೂಲಕ ತೆರಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.