ADVERTISEMENT

ಸಿಡಿ ಪ್ರಕರಣದಲ್ಲಿ ಡಿಕೆಶಿ ಹೆಸರು: ಇದು ಸಿದ್ದರಾಮಯ್ಯಗೆ ಸದಾವಕಾಶ ಎಂದ ಬಿಜೆಪಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 5 ಏಪ್ರಿಲ್ 2021, 7:28 IST
Last Updated 5 ಏಪ್ರಿಲ್ 2021, 7:28 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಬೆಂಗಳೂರು: ಸಿಡಿ ಪ್ರಕರಣದಲ್ಲಿ ಡಿ.ಕೆ.ಶಿವಕುಮಾರ್‌ ಹೆಸರು ಕೇಳಿಬರುತ್ತಿದ್ದಂತೆ ಸಿದ್ದರಾಮಯ್ಯ ಬಣ ಎಚ್ಚೆತ್ತುಕೊಂಡಿದೆ ಎಂದು ಬಿಜೆಪಿ ಹೇಳಿದೆ.

ಈ ಕುರಿತು ಸೋಮವಾರ ಟ್ವೀಟ್‌ ಮಾಡಿರುವ ಕರ್ನಾಟಕ ಬಿಜೆಪಿ, 'ಸದನದಲ್ಲಿ ಸಿಡಿ ವಿಚಾರದ ಬಗ್ಗೆ ಚರ್ಚಿಸುವಾಗ ಪ್ರಕರಣದಲ್ಲಿ ಡಿ.ಕೆ.ಶಿವಕುಮಾರ್‌ ಹೆಸರು ಪ್ರಸ್ತಾಪವಾಗಿರಲಿಲ್ಲ. ಹೀಗಾಗಿ, ಸದನದಲ್ಲಿ ಡಿಕೆಶಿ ಹಾಗೂ ಸಿದ್ದರಾಮಯ್ಯ ರೋಷಾವೇಶ ಪ್ರದರ್ಶಿಸಿದರು. ಈಗ ಷಡ್ಯಂತ್ರದಲ್ಲಿ ಡಿಕೆಶಿ ಹೆಸರು ಕೇಳಿ ಬರುತ್ತಿದೆ. ಆ ಕಾರಣ ಡಿಕೆಶಿ ಮೌನವಾಗಿದ್ದಾರೆ. ಸಿದ್ದರಾಮಯ್ಯ ಮತ್ತೆ ಮತ್ತೆ ಸಿಡಿ ವಿಚಾರವನ್ನು ಕೆದಕುತ್ತಿದ್ದಾರೆ' ಎಂದು ತಿಳಿಸಿದೆ.

'ಸಿಡಿ ಪ್ರಕರಣದಲ್ಲಿ ಡಿ.ಕೆ.ಶಿವಕುಮಾರ್ ಅವರ ಹೆಸರು ತಳುಕು ಹಾಕಿಕೊಳ್ಳುತ್ತಲೇ ಸಿದ್ದರಾಮಯ್ಯ ಬಣ ಎಚ್ಚೆತ್ತುಕೊಂಡಿದೆ. ಸಿಎಂ ಆಗುವ ಕನಸಿಗೆ ತೊಡಕಾಗಿರುವ ಡಿಕೆಶಿ ಅವರನ್ನು ಮಣಿಸಲು ಸಿದ್ದರಾಮಯ್ಯ ಅವರಿಗೆ ಇದೊಂದು ಸದಾವಕಾಶ. ಈ ಪ್ರಕರಣದಲ್ಲಿ ಡಿಕೆಶಿ ಅವರನ್ನು ಸಿಲುಕಿಸಲು ಶ್ರಮಿಸುತ್ತಿರುವ ಸಿದ್ದರಾಮಯ್ಯಗೆ ಶುಭವಾಗಲಿ' ಎಂದು ಬಿಜೆಪಿ ಟ್ವೀಟಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.