ADVERTISEMENT

ಲೈಂಗಿಕ ಕಿರುಕುಳ ಆರೋಪ ಪ್ರಕರಣದಲ್ಲಿ ಜೈಲು ಸೇರಿರುವ ಶರಣರ ಕೈದಿ ಸಂಖ್ಯೆ '2261'

​ಪ್ರಜಾವಾಣಿ ವಾರ್ತೆ
Published 3 ಸೆಪ್ಟೆಂಬರ್ 2022, 6:24 IST
Last Updated 3 ಸೆಪ್ಟೆಂಬರ್ 2022, 6:24 IST
ಶಿವಮೂರ್ತಿ ಮುರುಘಾ ಶರಣ
ಶಿವಮೂರ್ತಿ ಮುರುಘಾ ಶರಣ   

ಚಿತ್ರದುರ್ಗ:ಪ್ರೌಢಶಾಲೆಯ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರಿಗೆ ವಿಚಾರಣಾಧೀನ ಕೈದಿ ಸಂಖ್ಯೆ 2261 ನೀಡಲಾಗಿದೆ.

ಅವರನ್ನು ಗುರುವಾರ ರಾತ್ರಿ 10 ಗಂಟೆ ಸುಮಾರಿಗೆ ಪೊಲೀಸರು ಬಂಧಿಸಿದ್ದರು.ಪ್ರಾಥಮಿಕ ವಿಚಾರಣೆ, ವೈದ್ಯಕೀಯ ತಪಾಸಣೆ ಹಾಗೂ ನ್ಯಾಯಾಧೀಶರ ಎದುರು ಹಾಜರುಪಡಿಸುವ ಪ್ರಕ್ರಿಯೆ ಪೂರ್ಣಗೊಳಿಸಿದ ಶರಣರನ್ನು ಶುಕ್ರವಾರ ನಸುಕಿನ3 ಗಂಟೆಗೆಕಾರಾಗೃಹಕ್ಕೆ ಸೇರಿಸಲಾಗಿತ್ತು.

ಬಳಿಕ ಅವರಿಗೆ ಎದೆನೋವು ಕಾಣಿಸಿಕೊಂಡ ಕಾರಣಬೆಳಿಗ್ಗೆ 9.30ಕ್ಕೆಜಿಲ್ಲಾ ಆಸ್ಪತ್ರೆಗೆದಾಖಲಿಸಲಾಯಿತು. ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಗೆ ಕರೆದೊಯ್ಯಲು ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಆದರೆ, ಇದಕ್ಕೆ ನ್ಯಾಯಾಲಯ ಅನುಮತಿ ನೀಡಲಿಲ್ಲ.

ADVERTISEMENT

ಮಹಾಂತರುದ್ರ ಸ್ವಾಮೀಜಿ ಪ್ರಭಾರ ಪೀಠಾಧಿಪತಿ
ಶಿವಮೂರ್ತಿ ಮುರುಘಾ ಶರಣರ ಅನುಪಸ್ಥಿತಿಯಲ್ಲಿ ಮುರುಘಾ ಮಠದ ತಾತ್ಕಾಲಿಕ ಪೀಠಾಧಿಪತಿಯಾಗಿ ದಾವಣಗೆರೆ ತಾಲ್ಲೂಕಿನ ಹೆಬ್ಬಾಳು ವಿರಕ್ತ ಮಠದ ಮಹಾಂತರುದ್ರ ಸ್ವಾಮೀಜಿ ಅವರನ್ನು ನೇಮಕ ಮಾಡಲಾಗಿದೆ.

‘ಮಠದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಮಠದ ಎಸ್‌ಜೆಎಂ ವಿದ್ಯಾಪೀಠದ ಕಾರ್ಯದರ್ಶಿ ಹುದ್ದೆಗೆ ನಿವೃತ್ತ ನ್ಯಾಯಧೀಶ ಎಸ್‌.ಬಿ. ವಸ್ತ್ರದಮಠ ಅವರನ್ನು ನೇಮಕ ಮಾಡಲಾಗಿದೆ’ ಎಂದು ಮಠದ ಮೂಲಗಳು ಮಾಹಿತಿ ನೀಡಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.