ಲೈಂಗಿಕ ದೌರ್ಜನ್ಯ –ಪ್ರಾತಿನಿಧಿಕ ಚಿತ್ರ
ಬೆಂಗಳೂರು: ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ವಿಚಾರಣೆಗೆ ಹಾಜರಾಗುವಂತೆ ನಗರಾಭಿವೃದ್ಧಿ ಇಲಾಖೆ ಅಧೀನ ಕಾರ್ಯದರ್ಶಿ ಬಿ. ನಂದಕುಮಾರ್ ಅವರಿಗೆ ಆಂತರಿಕ ದೂರುಗಳ ಸಮಿತಿ ನೋಟಿಸ್ ನೀಡಿದೆ.
ವಿಕಾಸಸೌಧದಲ್ಲಿರುವ ನಗರಾಭಿವೃದ್ಧಿ ಇಲಾಖೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಮಹಿಳೆ, ತಾನು ಕೆಲಸ ಮಾಡುವ ಶಾಖೆಯ ಅಧೀನ ಕಾರ್ಯದರ್ಶಿ ಅಧಿಕಾರಿ ವಿರುದ್ಧ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ದೂರು ಸಲ್ಲಿಸಿದ್ದರು.
ಈ ಕುರಿತು ವಿಚಾರಣೆ ನಡೆಸಿ, ವರದಿ ಸಲ್ಲಿಸುವಂತೆ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ನಗರಾಭಿವೃದ್ಧಿ ಇಲಾಖೆಯ ಆಂತರಿಕ ದೂರು ಸಮಿತಿಗೆ ಪತ್ರ ಬರೆದಿದ್ದರು. ದೂರಿನ ಆಧಾರದಲ್ಲಿ ವಿಚಾರಣೆ ಹಾಜರಾಗುವಂತೆ ಸಮಿತಿ ಅಧ್ಯಕ್ಷೆ ಬಿ.ಎನ್. ಭಾಗ್ಯ ಅವರು ನೋಟಿಸ್ ಜಾರಿ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.