ADVERTISEMENT

ಲೈಂಗಿಕ ಕಿರುಕುಳ: ಪಿಐಎಲ್‌ ವಿಲೇವಾರಿ

​ಪ್ರಜಾವಾಣಿ ವಾರ್ತೆ
Published 11 ಜೂನ್ 2023, 5:04 IST
Last Updated 11 ಜೂನ್ 2023, 5:04 IST
   

ಬೆಂಗಳೂರು: ‘ಉದ್ಯೋಗದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ತಡೆಯುವ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಶಿಕ್ಷಣ ಸಂಸ್ಥೆಗಳಲ್ಲಿ ಆಂತರಿಕ ದೂರು ಸಮಿತಿಗಳನ್ನು ಕಡ್ಡಾಯವಾಗಿ ರಚಿಸುವಂತೆ ನಿರ್ದೇಶಿಸಬೇಕು‘ ಎಂದು ಕೋರಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಲೇವಾರಿ ಮಾಡಿದೆ.

‘ಉದ್ಯೋಗದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ತಡೆಯುವ ಹಿನ್ನೆಲೆಯಲ್ಲಿ ನೀಡಲಾಗಿರುವ ನಿರ್ದೇಶನಗಳ ಕುರಿತ ಅನುಪಾಲನಾ ವರದಿ ಸಲ್ಲಿಸಿ ಎಂದು ಸುಪ್ರೀಂ ಕೋರ್ಟ್‌; ಕೇಂದ್ರ, ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ತಾಕೀತು ಮಾಡಿದೆ. ಆದ್ದರಿಂದ, ಈ ಅರ್ಜಿಯನ್ನು ಮಾನ್ಯ ಮಾಡಲಾಗದು‘ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

ದುಡಿಯುವ ಸ್ಥಳಗಳಲ್ಲಿ ಮಹಿಳೆಯರ ಮೇಲೆ ಹಾಗೂ ಬಹುತೇಕ ಶಾಲೆಗಳಲ್ಲಿ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಆಕ್ಷೇಪಿಸಿ ‘ಕ್ರೀಟಮ್ಸ್‌ ಪ್ರೊಬೋನೊ ಮತ್ತು ಸೆಂಟರ್ ಫಾರ್ ಲೀಗಲ್ ರೀಸರ್ಚ್‘ ಈ ಅರ್ಜಿ ಸಲ್ಲಿಸಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.