ADVERTISEMENT

ಎಲ್ಲ ತರಗತಿಗಳನ್ನು ಆರಂಭಿಸಿ: ಎಸ್‌ಎಫ್‌ಐ ಆಗ್ರಹ

​ಪ್ರಜಾವಾಣಿ ವಾರ್ತೆ
Published 6 ಏಪ್ರಿಲ್ 2021, 4:22 IST
Last Updated 6 ಏಪ್ರಿಲ್ 2021, 4:22 IST

ಬೆಂಗಳೂರು: ‘6ರಿಂದ 9ನೇ ತರಗತಿಗಳನ್ನು ಸ್ಥಗಿತಗೊಳಿಸಿರುವುದು ಅವೈಜ್ಞಾನಿಕ ತೀರ್ಮಾನ. ಇದನ್ನು ಸರ್ಕಾರ ಕೂಡಲೇ ಹಿಂಪಡೆಯಬೇಕು’ ಎಂದುಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‍ಎಫ್‍ಐ) ಆಗ್ರಹಿಸಿದೆ.

‘ಕೋವಿಡ್‌ನಿಂದವಿದ್ಯಾರ್ಥಿಗಳಿಗೆ ಪರಿಣಾಮ ಬೀರುವುದಿಲ್ಲ ಎಂದು ವೈದ್ಯಕೀಯ ವರದಿಗಳು ತಿಳಿಸಿವೆ.ಶಾಲೆ ಮುಚ್ಚಿರುವುದರಿಂದ ಮಕ್ಕಳು ಬಾಲಕಾರ್ಮಿಕ, ಬಾಲ್ಯವಿವಾಹ, ಅಪೌಷ್ಟಿಕತೆಗೆ ಒಳಗಾಗುತ್ತಿದ್ದಾರೆ. ವಿದ್ಯಾರ್ಥಿಗಳಿಗೆ ಪರೀಕ್ಷೆಗಳನ್ನು ನಡೆಸುವುದು ಬೇಡ. ಮುಂದಿನ ತರಗತಿಗೆ ತೇರ್ಗಡೆ ಮಾಡಬೇಕು.ಎಲ್ಲ ಹಂತದ ತರಗತಿಗಳನ್ನು ಈ ಕೂಡಲೇ ಪ್ರಾರಂಭಿಸಬೇಕು’ ಎಂದು ಒತ್ತಾಯಿಸಿದೆ.

‘ಕೋವಿಡ್ ತಡೆಗೆಶಾಲೆಗಳಲ್ಲಿ ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು. ಶಾಲೆ ಬಿಟ್ಟಿರುವ ಮಕ್ಕಳ ರಕ್ಷಣೆಗಾಗಿ ತುರ್ತು ಸಮೀಕ್ಷೆ ಆಗಬೇಕು. ಶಾಲೆ ತೆರೆಯುವ ವಿಚಾರದಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಗೊಂದಲ ಹಾಗೂ ಆತಂಕ ಉಂಟು ಮಾಡುವುದನ್ನು ಸರ್ಕಾರ ನಿಲ್ಲಿಸಬೇಕು’ ಎಂದೂ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.