ADVERTISEMENT

ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಶಾಹೀನ್‌: ದೇಶದ್ರೋಹ ಪ್ರಕರಣ

​ಪ್ರಜಾವಾಣಿ ವಾರ್ತೆ
Published 25 ಫೆಬ್ರುವರಿ 2020, 19:33 IST
Last Updated 25 ಫೆಬ್ರುವರಿ 2020, 19:33 IST

ಬೀದರ್: ಶಾಹೀನ್ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ವಿವಾದಾತ್ಮಕ ನಾಟಕ ಮಾಡಿಸಿದ ಕಾರಣ ದಾಖಲಾಗಿರುವ ದೇಶದ್ರೋಹ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಹೀನ್ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯವರು ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆಯನ್ನು ಫೆ.29ಕ್ಕೆ ಮುಂದೂಡಲಾಯಿತು.

ಪ್ರಧಾನ ಜಿಲ್ಲಾ ಹಾಗೂ ಸೆಷನ್ಸ್‌ ನ್ಯಾಯಾಲಯ ನ್ಯಾಯಾಧೀಶರು ರಜೆಯ ಮೇಲಿದ್ದ ಕಾರಣ ಅರ್ಜಿಯ ವಿಚಾರಣೆಯನ್ನು ಮುಂದೂಡಲಾಯಿತು.

ಶಾಹೀನ್‌ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಅಬ್ದುಲ್‌ ಖದೀರ್, ಪ್ರಮುಖರಾದ ಹಕ್‌ ಕಾಲೊನಿಯ ಅಲ್ಲಾವುದ್ದಿನ್‌ ಸಯ್ಯದ್‌ ಪಾಷಾ ಹುಸೇನಿ, ಅಬ್ದುಲ್‌ ಖಾಲಿಕ್‌ ಅಬ್ದುಲ್‌ ರಜಾಕ್, ಸಿದ್ಧಿ ತಾಲೀಂನ ಮಹಮ್ಮದ್‌ ಬಿಲ್ಲಾ ಇನಾಮದಾರ್, ಗುಲಾಂನಬಿ ಇನಾಮದಾರ್, ಗೋಲೆಖಾನಾದ ಮಹಮ್ಮದ್‌ ಮೆಹತಾಬ್, ಮಹಮ್ಮದ್‌ ಅಬ್ದುಲ್‌ ಕರೀಂ ಅವರು ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದಾರೆ.

ADVERTISEMENT

ಫೇಸ್‌ಬುಕ್‌ನಲ್ಲಿ ವಿಡಿಯೊ ಅಪ್‌ಲೋಡ್‌ ಮಾಡಿದ ಪತ್ರಕರ್ತ ಯುಸೂಫ್‌ ರಹೀಂ ಅವರ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ಫೆ. 26ಕ್ಕೆ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.