
ಬೆಂಗಳೂರು: ನಾಲ್ಕು ಸಾರಿಗೆ ನಿಗಮಗಳ ಬಸ್‌ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸುವ ‘ಶಕ್ತಿ’ ಯೋಜನೆಗೆ ನವೆಂಬರ್ ತಿಂಗಳ ಮುಂಗಡ ವೆಚ್ಚವಾಗಿ ₹ 441.66 ಕೋಟಿ ಬಿಡುಗಡೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಕೆಎಸ್‌ಆರ್‌ಟಿಸಿಗೆ ₹ 171.41 ಕೋಟಿ, ಬಿಎಂಟಿಸಿಗೆ ₹ 75.65 ಕೋಟಿ, ಎನ್‌ಡಬ್ಲ್ಯುಆರ್‌ಟಿಸಿಗೆ ₹ 107.67 ಕೋಟಿ, ಕೆಕೆಆರ್‌ಟಿಸಿಗೆ ₹ 86.92 ಕೋಟಿ ಹಂಚಿಕೆ ಮಾಡಲಾಗಿದೆ.
ನಾಲ್ಕು ಸಾರಿಗೆ ಸಂಸ್ಥೆಗಳ ವಾಸ್ತವಿಕ ವೆಚ್ಚದ ವಿವರಗಳನ್ನು ಸರ್ಕಾರಕ್ಕೆ ಶಕ್ತಿ ಯೋಜನೆಯ ನೋಡಲ್ ಸಂಸ್ಥೆಯಾದ ಕೆಎಸ್‌ಆರ್‌ಟಿಸಿ ಸಲ್ಲಿಸಬೇಕು. ಶಕ್ತಿ ಸ್ಮಾರ್ಟ್ ಕಾರ್ಡ್‌ಗಳನ್ನು ವಿತರಿಸಬೇಕು. ಬಿಡುಗಡೆ ಮಾಡಿರುವ ಅನುದಾನದ ಬಳಕೆಯ ಪ್ರಮಾಣಪತ್ರವನ್ನು ಸಲ್ಲಿಸಬೇಕು ಎಂದು ಷರತ್ತು ವಿಧಿಸಲಾಗಿದೆ.
2025–26ನೇ ಸಾಲಿನ ಬಜೆಟ್‌ನಲ್ಲಿ ಶಕ್ತಿ ಯೋಜನೆಗೆ ಲೆಕ್ಕ ಶೀರ್ಷಿಕೆ ಸಹಾಯಧನದಡಿ ₹ 3,763 ಕೋಟಿ, ಪರಿಶಿಷ್ಟ ಜಾತಿ ಉಪ ಯೋಜನೆಯಡಿ (ಎಸ್‌ಸಿಎಸ್‌ಪಿ) ₹ 1,060 ಕೋಟಿ, ಗಿರಿಜನ ಉಪ ಯೋಜನೆಯಡಿ (ಟಿಎಸ್‌ಪಿ) ₹ 477 ಕೋಟಿ ಸೇರಿ ಒಟ್ಟು ₹5,300 ಕೋಟಿ ಹಂಚಿಕೆ ಮಾಡಲಾಗಿತ್ತು.
ಅದರಲ್ಲಿ ಏಪ್ರಿಲ್‌ನಿಂದ ಅಕ್ಟೋಬರ್‌ವರೆಗೆ ₹ 2,492.33 ಕೋಟಿ ಬಿಡುಗಡೆ ಮಾಡಲಾಗಿತ್ತು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.