ADVERTISEMENT

ಚುನಾವಣಾ ಕಾರ್ಯಕ್ಕೆ ಶಿಕ್ಷಕೇತರರ ಬಳಕೆ: ಶಾಲಿನಿ ರಜನೀಶ್‌

​ಪ್ರಜಾವಾಣಿ ವಾರ್ತೆ
Published 28 ಜುಲೈ 2025, 16:14 IST
Last Updated 28 ಜುಲೈ 2025, 16:14 IST
<div class="paragraphs"><p>ಶಾಲಿನಿ ರಜನೀಶ್‌</p></div>

ಶಾಲಿನಿ ರಜನೀಶ್‌

   

ಬೆಂಗಳೂರು: ಚುನಾವಣಾ ಕರ್ತವ್ಯಗಳಿಗೆ ವಿವಿಧ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಹಾಗೂ ಬೋಧಕೇತರ ಸಿಬ್ಬಂದಿಯನ್ನು ನಿಯೋಜಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರು ಎಲ್ಲ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ. 

ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯ ಹಾಗೂ ಮತಗಟ್ಟೆ ಅಧಿಕಾರಿಗಳಾಗಿ ಶಿಕ್ಷಕರನ್ನು ನೇಮಿಸುತ್ತಿರುವುದರಿಂದ ನಿತ್ಯದ ಪಾಠಗಳಿಗೆ ತೊಂದರೆಯಾಗುತ್ತಿದೆ. ಇದರಿಂದ ಮಕ್ಕಳ ಕಲಿಕೆಯ ಮೇಲೆ ಪರಿಣಾಮ ಬೀರುತ್ತಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮುಖ್ಯ ಚುನಾವಣಾಧಿಕಾರಿಗೆ ಪತ್ರ ಬರೆದು, ಮನವಿ ಮಾಡಿದ್ದಾರೆ.

ADVERTISEMENT

ಸುಪ್ರೀಂಕೋರ್ಟ್‌ ಸಹ ರಜಾ ದಿನಗಳು, ಬೋಧಕೇತರ ಅವಧಿಯಲ್ಲಿ ಶಿಕ್ಷಕರನ್ನು ಚುನಾವಣಾ ಕಾರ್ಯಕ್ಕೆ ನಿಯೋಜಿಸಬಹುದು ಎಂದಿದೆ. ಹಾಗಾಗಿ, ಬೋಧಕೇತರ ಹಾಗೂ ಇತರೆ ಇಲಾಖೆಯ ಸಿಬ್ಬಂದಿಯನ್ನು ಹೆಚ್ಚಿನ ಸಂಖ್ಯೆಯಲ್ಲಿ ಚುನಾವಣಾ ಕಾರ್ಯಗಳಿಗೆ ಬಳಸಿಕೊಳ್ಳುವಂತೆ ಸಲಹೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.