ADVERTISEMENT

ಚಿತ್ರದುರ್ಗ ಜಿಲ್ಲಾ ಪಂಚಾಯಿತಿಗೆ ಕಾಂಗ್ರೆಸ್ ಪಕ್ಷದ ಶಶಿಕಲಾ ಸುರೇಶಬಾಬು ಅಧ್ಯಕ್ಷೆ

​ಪ್ರಜಾವಾಣಿ ವಾರ್ತೆ
Published 22 ಮೇ 2020, 6:57 IST
Last Updated 22 ಮೇ 2020, 6:57 IST
ಜಿಲ್ಲಾ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಕಾಂಗ್ರೆಸ್ ಪಕ್ಷದ ಶಶಿಕಲಾ ಸುರೇಶಬಾಬು
ಜಿಲ್ಲಾ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಕಾಂಗ್ರೆಸ್ ಪಕ್ಷದ ಶಶಿಕಲಾ ಸುರೇಶಬಾಬು    

ಚಿತ್ರದುರ್ಗ: ಜಿಲ್ಲಾ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷದ ಶಶಿಕಲಾ ಸುರೇಶಬಾಬು ಅವರು ಶುಕ್ರವಾರ ಅವಿರೋಧವಾಗಿ ಆಯ್ಕೆಯಾದರು.

ಅಧ್ಯಕ್ಷರ ಆಯ್ಕೆಯನ್ನು ಪ್ರಾದೇಶಿಕ ಆಯುಕ್ತ ವಿ.ಪಿ.ಇಕ್ಕೇರಿ ಅವರು ಅಧಿಕೃತವಾಗಿ ಘೋಷಣೆ ಮಾಡಿದರು. ಜಿ.ಎಂ.ವಿಶಾಲಾಕ್ಷಿ ಅವರ ರಾಜೀನಾಮೆಯಿಂದ ತೆರವಾದ ಅಧ್ಯಕ್ಷ ಸ್ಥಾನಕ್ಕೆ ಶುಕ್ರವಾರ ಚುನಾವಣೆ ನಿಗದಿಯಾಗಿತ್ತು.

37 ಸದಸ್ಯಬಲದ ಜಿಲ್ಲಾ ಪಂಚಾಯಿತಿಯಲ್ಲಿ ಕಾಂಗ್ರೆಸ್ 22, ಬಿಜೆಪಿ 10, ಜೆಡಿಎಸ್ 2, ಪಕ್ಷೇತರ 2 ಹಾಗೂ ಒಬ್ಬರು ಕಾಂಗ್ರೆಸ್ ಉಚ್ಚಾಟಿತ ಸದಸ್ಯೆ ಇದ್ದರು. ಬಹುಮತ ಹೊಂದಿದ ಕಾಂಗ್ರೆಸ್ ಅಧಿಕಾರ ಹಿಡಿಯುವುದು ನಿಶ್ಚಿತ ಆಗಿತ್ತು. ಆಪರೇಷನ್ ಕಮಲಕ್ಕೆ ಪ್ರಯತ್ನ ನಡೆದಿತ್ತು

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.